ಸಂಕ್ರಾಂತಿ ದಿನ ಮೆಟ್ರೋ ಪ್ರಯಾಣಿಕರಿಗೆ ಶುಭಸುದ್ದಿ, ಪಾಸ್‌ ಆರಂಭ

Picture of Savistara

Savistara

Bureau Report

ಸಂಕ್ರಾಂತಿ ಹಬ್ಬದ ದಿನವೇ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ಕೊಟ್ಟಿದ್ದು, ಇಂದಿನಿಂದ ಮೆಟ್ರೋ ನಿಲ್ದಾಣದಲ್ಲಿ ಕ್ಯೂಆ‌ರ್ ಆಧಾರಿತ ದಿನ, ಮೂರು ದಿನ ಮತ್ತು 5 ದಿನಗಳ ಪಾಸ್‌ ಲಭ್ಯವಿರಲಿದೆ.1, 3, 5 ದಿನಗಳ ಅನಿಯಮಿತ ಪ್ರಯಾಣದ ಪಾಸ್‌ನ BMRCL ಪರಿಚಯಿಸಿದ್ದು, ಡಿಜಿಟಲ್ ಟಿಕೆಟ್ ವ್ಯವಸ್ಥೆ ಉತ್ತೇಜಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಇಷ್ಟು ದಿನ ಕಾಂಟ್ಯಾಕ್ಟ್ ಲೆಸ್ ಸ್ಮಾರ್ಟ್ ಕಾರ್ಡ್ ಮೂಲಕ ಮಾತ್ರ ಅನಿಯಮಿತ ಪಾಸ್ ಇತ್ತು.ಅದಕ್ಕಾಗಿ ಭದ್ರತಾ ಠೇವಣಿ 50 ರೂಪಾಯಿ ಪಾವತಿ ಮಾಡಬೇಕಿತ್ತು. ಆದರಿನ್ನು ಮೊಬೈಲ್‌ನಲ್ಲೇ QR ಕೋಡ್ ಬಳಸಿ ಪಾಸ್‌ ಪಡೆಯಬಹುದಾಗಿದ್ದು, ಯಾವುದೇ ಭದ್ರತಾ ಠೇವಣಿ ಇರುವುದಿಲ್ಲ. 1 ದಿನದ ಮೆಟ್ರೋ ಪ್ರಯಾಣ ಪಾಸ್‌ಗೆ 250 ರೂ., 3 ದಿನಗಳ ಮೆಟ್ರೋ ಪ್ರಯಾಣ ಪಾಸ್‌ಗೆ 550 ರೂ. ಮತ್ತು 5 ದಿನಗಳ ಮೆಟ್ರೋ ಪ್ರಯಾಣ ಪಾಸ್‌ಗೆ 850 ರೂ. ನಿಗದಿ ಮಾಡಲಾಗಿದೆ.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!