ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಸ್ಯಾಲರಿ ಪ್ಯಾಕೇಜ್’ ಮಾಡಿಕೊಳ್ಳದಿದ್ದರೆ `ಜನವರಿ ವೇತನ ಬಿಲ್’ ಆಗಲ್ಲ.!

Picture of Savistara

Savistara

Bureau Report

ಬೆಂಗಳೂರು : ರಾಜ್ಯ ಸರ್ಕಾರದಿಂದ ನೇರವಾಗಿ / ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ ” ‘ಬಿ’ ಮತ್ತು ‘ಸಿ’ ಗುಂಪಿನ ಅರ್ಹ ಅಧಿಕಾರಿಗಳು/ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಕಾಲಾವಧಿಯನ್ನು ವಿಸ್ತರಿಸುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ ಎಲ್ಲಾ ಅರ್ಹ “ಎ”, “ಬಿ” ಮತ್ತು “ಸಿ” ಗುಂಪಿನ ಅಧಿಕಾರಿಗಳು/ನೌಕರರಿಗೆ ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ದಿನಾಂಕ: 15.12.2025 ರೊಳಗಡೆ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು.ಆದರೆ, ಹಲವು ಅಧಿಕಾರಿಗಳು/ನೌಕರರು ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವಲ್ಲಿ ಇನ್ನೂ ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ, ‘ಎ’ ಮತ್ತು “ಬಿ” ಗುಂಪಿನ ಅಧಿಕಾರಿಗಳಿಗೆ ಹಾಗೂ ‘ಸಿ’ ಗುಂಪಿನ ನೌಕರರಿಗೆ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳಲು ದಿನಾಂಕ: 16.01.2026ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.

[t4b-ticker]
error: Content is protected !!