NOTA ಕ್ಕೆ ಮತ ಹಾಕುವುದು ಅನಗತ್ಯ ಅಭ್ಯರ್ಥಿಗೆ ಪ್ರಚಾರ ಮಾಡಿದಂತೆ: ಮೋಹನ್ ಭಾಗವತ್

Picture of Savistara

Savistara

Bureau Report

ನಾಗುರ: ‘ಮತದಾರರು ನೋಟಾ ಆಯ್ಕೆ ಮಾಡಿದರೆಪರೋಕ್ಷವಾಗಿ ಅನಪೇಕ್ಷಿತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಹಾಯ ಮಾಡುತ್ತದೆ’ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಗುರುವಾರ ನಾಗುರ ಮುನ್ಸಿಪಲ್ ಕಾರ್ಪೊರೇಷನ್ (NMC) ಚುನಾವಣೆಗೆ ಮತ ಚಲಾಯಿಸಿದ ನಂತರ ಮಾತನಾಡಿ, ನಾಗರಿಕರು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಮತ್ತು ತಿಳಿವಳಿಕೆಯುಳ್ಳ ಆಯ್ಕೆಗಳನ್ನು ಮಾಡಬೇಕು’ ಎಂದು ಮನವಿ ಮಾಡಿದರು.”ಚುನಾವಣೆಗಳು ಪ್ರಜಾಪ್ರಭುತ್ವದ ಕಡ್ಡಾಯ ಭಾಗವಾಗಿದ್ದು, ಮತದಾನವು ಎಲ್ಲಾ ನಾಗರಿಕರ ಕರ್ತವ್ಯವಾಗಿದೆ. ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಪ್ರತಿಯೊಬ್ಬರೂ ಸೂಕ್ತ ಅಭ್ಯರ್ಥಿಗೆ ಮತ ಚಲಾಯಿಸಬೇಕು”ಎಂದರು.ನೋಟಾ ಆಯ್ಕೆ ಲಭ್ಯವಿದೆ ಎಂದು ಎಲ್ಲಾ ಅಭ್ಯರ್ಥಿಗಳನ್ನು ತಿರಸ್ಕರಿಸುವುದು ಪ್ರಜಾಪ್ರಭುತ್ವವನ್ನು ಬಲಪಡಿಸುವುದಿಲ್ಲ ಎಂದು ಭಾಗವತ್‌ ಹೇಳಿದರು. ನೋಟಾ ಎಂದರೆ ನೀವು ಎಲ್ಲರನ್ನೂ ತಿರಸ್ಕರಿಸುತ್ತೀರಿ ಮತ್ತು ಹಾಗೆ ಮಾಡುವುದರಿಂದ ನಾವು ಬೇಡವಾದ ವ್ಯಕ್ತಿಗೆ ಪ್ರಚಾರ ಮಾಡಿದಂತಾಗುತ್ತದೆ” ಎಂದರು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!