ಉಡುಪಿ: ಮಲಯಾಳಂ ಚಿತ್ರರಂಗದ ಹೆಸರಾಂತ ನಟ ಹಾಗೂ ಕೇಂದ್ರ ಸಚಿವರಾದ ಸುರೇಶ್ ಗೋಪಿ ಅವರು ಕುಟುಂಬ ಸದಸ್ಯರೊಂದಿಗೆ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಶಿರೂರು ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಯಶ್ ಪಾಲ್ ಸುವರ್ಣ ಅವರು, ಶಿರೂರು ಪರ್ಯಾಯದ ಆಮಂತ್ರಣ ಪತ್ರಿಕೆಯನ್ನು ಕೇಂದ್ರ ಸಚಿವರಿಗೆ ನೀಡುತ್ತಾ ಪರ್ಯಾಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಆಹ್ವಾನಿಸಿದರು.ಈ ವೇಳೆ ಪರ್ಯಾಯ ಸ್ವಾಗತ ಸಮಿತಿಯ ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ ಹಾಗೂ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ ಉಪಸ್ಥಿತರಿದ್ದರು.
ಮಲಯಾಳಂ ಚಿತ್ರರಂಗದ ಹೆಸರಾಂತ ನಟ ಹಾಗೂ ಕೇಂದ್ರ ಸಚಿವ ಸುರೇಶ್ ಗೋಪಿ ಕೃಷ್ಣ ಮಠಕ್ಕೆ ಭೇಟಿ!
Savistara
Bureau Report
[t4b-ticker]













































