ಎ.1ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಬಂದ್‌?

Picture of Savistara

Savistara

Bureau Report

ಹೊಸದಿಲ್ಲಿ: ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ಏ.1ರಿಂದ ನಗದು ಪಾವತಿಯನ್ನು ನಿಷೇಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಡಿಜಿಟಲ್ ಪಾವತಿ ಉತ್ತೇಜಿಸುವ ನಿಟ್ಟಿನಲ್ಲಿ ಈ ಹೊಸ ನಿಯಮವನ್ನು ಜಾರಿಗೆ ತರುವ ಸಾಧ್ಯತೆ ಇದೆ.ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಅಧಿಸೂಚನೆ ಹೊರಡಿಸಿಲ್ಲವಾದರೂ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಈ ಬಗ್ಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ. ವಾಹನಗಳ ದಟ್ಟಣೆ ಯನ್ನು ಕಡಿಮೆಮಾಡಲು ಹಾಗೂ ಪ್ರಯಾಣವನ್ನು ಸುಗಮಗೊಳಿಸಲು ಪ್ರಯಾಣಿಕರು ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಪಾವತಿಸಲು ಮಾತ್ರ ಅವಕಾಶ ನೀಡುವ ಬಗ್ಗೆ ಚಿಂತಿಸುತ್ತಿದೆ.

ನಗದು ನೀಡಿ ಪಾವತಿ ಮಾಡುವಾಗ ಅದರ ರಶೀದಿ ಪಡೆಯಲು ತುಂಬಾ ಸಮಯ ತೆಗೆದುಕೊಳ್ಳುತ್ತಿದ್ದು, ಇದರಿಂದ ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ಇದನ್ನು ಕಡಿಮೆ ಮಾಡಿ ತಡೆ ರಹಿತ ಸಂಚಾರಕ್ಕೆ ಅನುವು ಮಾಡಿಕೊಡಲು ಈ ಹೊಸ ನಿಯಮವನ್ನು ತರಲು ಸರ್ಕಾರ ಸಜ್ಜಾಗಿದೆ. ಜತೆಗೆ ಡಿಜಿಟಲ್ ಪಾವತಿ ವ್ಯವಸ್ಥೆಯಿಂದ ಎಲ್ಲಾ ವಹಿವಾಟುಗಳ ಸ್ಪಷ್ಟವಾಗಿ ಟ್ರಾÂಕ್‌ ಮಾಡಬಹುದು ಎಂದು ವರದಿಯಾಗಿದೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!