ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ: ಸಿ.ಟಿ. ರವಿ, ಎಸ್.ಎಲ್. ಭೋಜೇಗೌಡಗೆ ಗೆಲುವು

Picture of Savistara

Savistara

Bureau Report

ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಚುನಾವಣೆಯಲ್ಲಿ ಎಂಎಲ್​ಸಿಗಳಾದ ಸಿ.ಟಿ. ರವಿ, ಎಸ್.ಎಲ್. ಭೋಜೇಗೌಡ ಜಯ ಸಾಧಿಸಿದ್ದಾರೆ.

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟದ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ ಹಾಗೂ ಎಸ್.ಎಲ್. ಭೋಜೇಗೌಡ ಭರ್ಜರಿ ಜಯ ಸಾಧಿಸಿದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್‌ ಪಕ್ಷ ಹೀನಾಯವಾಗಿ ಸೋಲನುಭವಿಸಿದೆ.ಸಿ.ಟಿ. ರವಿ ಅವರಿಗೆ 27 ಮತ ಚಲಾವಣೆಗೊಂಡಿದ್ದರೆ, ಎಸ್.ಎಲ್. ಭೋಜೇಗೌಡ ಅವರು 30 ಮತ ಪಡೆದಿದ್ದಾರೆ. ಬಿಜೆಪಿ ರೆಬಲ್ ಅಭ್ಯರ್ಥಿಯಾಗಿದ್ದ ನಿರಂಜನ್​ಗೆ ಕೇವಲ ಐದು ಮತಗಳು ಮಾತ್ರ ಸಿಕ್ಕಿವೆ. ಒಟ್ಟು 13 ನಿರ್ದೇಶಕರ ಸ್ಥಾನಗಳಲ್ಲಿ 8 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 5 ಕ್ಷೇತ್ರಗಳಿಗೆ ಮಾತ್ರ ಚುನಾವಣೆ ನಡೆದಿತ್ತು. ಒಟ್ಟು 13 ನಿರ್ದೇಶಕ ಸ್ಥಾನಗಳಲ್ಲಿ 11 ಸ್ಥಾನಗಳನ್ನು ಬಿಜೆಪಿ ಗೆದ್ದರೆ, ಜೆಡಿಎಸ್‌ 2 ಸ್ಥಾನಗಳಲ್ಲಿ ಜಯ ಗಳಿಸಿದೆ.

ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಚಿಕ್ಕಮಗಳೂರು ನಗರದ ಡಿಸಿಸಿ ಬ್ಯಾಂಕ್ ಎದುರು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಚುನಾವಣೆಯಲ್ಲಿ ಹಾಲಿ ಕಾಂಗ್ರೆಸ್ ಶಾಸಕ ಕಡೂರಿನ ಕೆ.ಎಸ್. ಆನಂದ್ ಅವರಿಗೆ ಭಾರಿ ಸೋಲು ಉಂಟಾಗಿದೆ. ಕೊಪ್ಪದ ಬಿಜೆಪಿ ಮುಖಂಡ ದಿನೇಶ್ ಹೊಸೂರು ವಿರುದ್ಧ ಪರಾಭವಗೊಂಡಿದ್ದಾರೆ. ವ್ಯವಸಾಯೋತ್ಪನ್ನ ಸಹಕಾರ ಸಂಘದಿಂದ ಸ್ಪರ್ಧಿಸಿದ್ದ ಕೆ.ಎಸ್. ಆನಂದ್ ಅವರ ಸೋಲು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಜಿಲ್ಲೆಯಲ್ಲಿ ಐವರು ಕಾಂಗ್ರೆಸ್ ಶಾಸಕರಿದ್ದರೂ ಸಹ ಪಕ್ಷದ ಅಭ್ಯರ್ಥಿಗಳು ಸೋಲು ಕಂಡಿರುವುದು ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿದೆ.ಮೂಡಿಗೆರೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೂ ಈ ಚುನಾವಣೆಯಲ್ಲಿ ಸೋಲು ಉಂಟಾಗಿದ್ದು, ಪ್ರಾಥಮಿಕ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ಗಳ ಸಹಕಾರ ಸಂಘದಿಂದ ಸ್ಪರ್ಧಿಸಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ ನಡೆದ ಮತ ಎಣಿಕೆ ವೇಳೆ ತೀವ್ರ ಕುತೂಹಲ ಮೂಡಿಸಿತ್ತು.ಈ ಚುನಾವಣೆಯ ಫಲಿತಾಂಶ ಚಿಕ್ಕಮಗಳೂರು ಜಿಲ್ಲೆಯ ರಾಜಕೀಯ ಚಿತ್ರಣವನ್ನೇ ಬದಲಿಸಿದೆ ಎಂದರೆ ತಪ್ಪಾಗಲಾರದು. ಮುಂದಿನ ದಿನಗಳಲ್ಲಿ ಜಿಲ್ಲೆಯ ರಾಜಕೀಯದ ಮೇಲೆ ಮಹತ್ವದ ಪರಿಣಾಮ ಬೀರುವ ಸಾಧ್ಯತೆ ಇದ್ದು, ಮುಂದೆ ಬರುವ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳ ಮೇಲೆ ಯಾವ ರೀತಿ ಈ ಫಲಿತಾಂಶ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ. ಅಲ್ಲದೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಬಿಜೆಪಿ 11 ಸ್ಥಾನ ಜೆಡಿಎಸ್ 2 ಸ್ಥಾನ ಪಡೆದುಕೊಂಡಿದ್ದು, ಈ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಯಾರಾಗಲಿದ್ದಾರೆ? ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!