ಫೆ.10ರಿಂದ ಪ್ರಥಮ ಪಿಯು ವಾರ್ಷಿಕ ಪರೀಕ್ಷೆ

Picture of Savistara

Savistara

Bureau Report

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ (2025-26)ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯನ್ನು ಫೆ.10ರಿಂದ 25ರವರೆಗೆ ನಡೆಸುವಂತೆ ಪಿಯು ಕಾಲೇಜುಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪರೀಕ್ಷೆ ಸಂಬಂಧ ಯಾವುದೇ ಹಣ ಸಂಗ್ರಹಿಸದೇ ಎಲ್ಲ ಪರೀಕ್ಷಾ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಕಾಲೇಜು ಮಟ್ಟದಲ್ಲಿ ನಡೆಸಬೇಕು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ . ವೆಬ್‌ಸೈಟ್‌ನಲ್ಲಿ ಅಳವಡಿಸಿರುವ ದ್ವಿತೀಯ ಪಿಯು ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಅನುಸರಿಸಿ, ಅದೇ ಮಾದರಿಯಲ್ಲಿ ಪ್ರಥಮ ಪಿಯು ತರಗತಿಗೆ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕಾರ್ಯ ನಡೆಸುವಂತೆ ಸೂಚಿಸಲಾಗಿದೆ.2.ಫೆ.25 ರೊಳಗೆ ಎಲ್ಲ ಪರೀಕ್ಷಾ ಕಾರ್ಯಗಳನ್ನು ಪೂರ್ಣಗೊಳಿಸಿ ವಿದ್ಯಾರ್ಥಿಗಳು ಪಡೆದ ಅಂಕಗಳನ್ನು ಎಸ್‌ಎಟಿಎಸ್ ತಂತ್ರಾಂಶದಲ್ಲಿ ಇಂದೀಕರಿಸಬೇಕು. ಫಲಿತಾಂಶ ಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.

ಮಾ.13ರೊಳಗೆ ಫಲಿತಾಂಶ ಪಟ್ಟಿಗೆ ಜಿಲ್ಲಾ ಉಪನಿರ್ದೇಶಕರಿಂದ ಅನುಮೋದನೆ ಪಡೆಯಬೇಕು. ಮಾ.30ರಂದು ಫಲಿತಾಂಶ ಪ್ರಕಟಿಸುವಂತೆ ಪಿಯು ಇಲಾಖೆ ನಿರ್ದೇಶಕ ಭರತ್‌ ಸೂಚನೆ ನೀಡಿದ್ದಾರೆ.

ಇಂದಿನಿಂದ 2ನೇ ಪೂರ್ವ ಸಿದ್ಧತಾಎಕ್ಸಾಂ: ದ್ವಿತೀಯ ಪಿಯು ಎರಡನೇ ಪೂರ್ವ ಸಿದ್ಧತಾ ಪರೀಕ್ಷೆಯು ಜ.19ರಿಂದ ಫೆ.2ರವರೆಗೆ ನಡೆಯಲಿದೆ. ಮೊದಲ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿದ್ದ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.ಎರಡನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದರೆ ಸಂಬಂಧ ಪಟ್ಟ ಕಾಲೇಜುಗಳ ಮಾನ್ಯತೆಯನ್ನೇ ರದ್ದುಪಡಿಸುವುದು, ಪ್ರಾಂಶುಪಾಲರ ಮೇಲೆ ಎಫ್‌ಐಆರ್ ದಾಖಲಿಸಿ ಶಿಸ್ತುಕ್ರಮ ಕೈಗೊಳ್ಳುವುದು ಸೇರಿ ಸೋರಿಕೆಯಲ್ಲಿ ಭಾಗಿಯಾಗುವ ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!