ಪರ್ಯಾಯ ವೇಳೆ ಕೇಸರಿ ಧ್ವಜ ಹಿಡಿದ ಉಡುಪಿ ಜಿಲ್ಲಾಧಿಕಾರಿ – ವಿಡಿಯೋ ವೈರಲ್ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ

Picture of Savistara

Savistara

Bureau Report

ಉಡುಪಿ ಜನವರಿ 19: ಉಡುಪಿ ಪರ್ಯಾಯ ಮೆರವಣಿಗೆ ಚಾಲನೆ ವೇಳೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಅವರು ಕೇಸರಿ ಧ್ವಜ ಹಿಡಿದಿರುವ ವಿಡಿಯೋ ವೈರಲ್ ಆಗಿದ್ದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆ ಸ್ವತಃ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.ಉಡುಪಿ ಪರ್ಯಾಯ ಮೆರವಣಿಗೆ ಪ್ರಾರಂಭದ ವೇಳೆ ಶಾಸಕ ಯಶ್ ಪಾಲ್ ಸುವರ್ಣ ಅವರು ಡಿಸಿಗೆ ಕೇಸರಿ ಧ್ವಜ ಹಸ್ತಾಂತರಿಸಿದ್ದರು. ಶಾಸಕರಿಂದ ಕೇಸರಿ ಧ್ವಜ ಪಡೆದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮೆರವಣಿಗೆಗೆ ಚಾಲನೆ ನೀಡಿದ್ದರು. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕೇಸರಿ ಧ್ವಜ ತೋರಿಸಿ ಚಾಲನೆ ನೀಡಿದ್ದಕ್ಕೆ ವಿರೋಧದ ಮಾತುಗಳು ಕೇಳಿ ಬಂದಿದೆ.ಇನ್ನು ಆಕ್ಷೇಪಗಳು ಕೇಳಿ ಬಂದ ಬಗ್ಗೆ ಜಿಲ್ಲಾಧಿಕಾರಿ ಕೇಸರಿ ಅವರು ಪ್ರತಿಕ್ರಿಯಿಸಿದ್ದಾರೆ. ಪರ್ಯಾಯ ಮಹೋತ್ಸವದ ವೇಳೆ ನಗರಸಭೆಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಆಡಳಿಧಿಕಾರಿ ಆಗಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇನೆ. ಅದನ್ನು ಹೊರತುಪಡಿಸಿ ಯಾವುದೇ ರಾಜಕೀಯ ಪ್ರೇರಿತ ಭಾಗವಹಿಸುವಿಕೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಪುರಪ್ರವೇಶಕ್ಕೂ ನಗರಸಭೆಯ ಆಡಳಿತಾಧಿಕಾರಿಯಾಗಿ ಭಾಗವಹಿಸಿದ್ದೇನೆ. ಯತಿಗಳ ಪೌರ ಸಮ್ಮಾನ ಹಾಗೂ ಸರ್ವಜ್ಞ ಪೀಠ ಏರಿದ ನಂತರ ದರ್ಬಾರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಈ ವಿಚಾರವನ್ನು ಸಾರ್ವಜನಿಕರು ಗಮನಿಸಬೇಕು ಎಂದು ತಿಳಿಸಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!