ಶಿವಮೊಗ್ಗ : ಸಂಸದ ಬಿ.ವೈ. ರಾಘವೇಂದ್ರ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ವಾಹನ

Picture of Savistara

Savistara

Bureau Report

ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕುಂಚೇನಹಳ್ಳಿ ಗ್ರಾಮದ ಬಳಿ ನಡೆದಿದೆ.ಸಂಸದರು ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.

ಕುಂಚೇನಹಳ್ಳಿ ಗ್ರಾಮದ ಸಮೀಪ ಸಂಸದರ ಕಾರು ಚಲಿಸುತ್ತಿದ್ದಾಗ ಹಿಂದಿನಿಂದ ಬಂದ ಬೊಲೇರೊ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರುಗಳಿಗೆ ಹಾನಿಯಾಗಿದೆ. ಸಂಸದ ರಾಘವೇಂದ್ರ ಸೇರಿದಂತೆ ಕಾರಿನಲ್ಲಿದ್ದ ಸಂಸದರ ಕಚೇರಿ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.ಎಸ್ಕಾರ್ಟ್ ವಾಹನದಲ್ಲೇ ವಿಮಾನ ನಿಲ್ದಾಣದವರೆಗೂ ಪ್ರಯಾಣ ಬೆಳೆಸಿದರು.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!