ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್​ ಬಳಕೆ ಸಂಪೂರ್ಣ ನಿಷೇಧ? ಮಹತ್ವದ ನಿರ್ಧಾರಕ್ಕೆ ಮುಂದಾದ ಇಲಾಖೆ

Picture of Savistara

Savistara

Bureau Report

ಬೆಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು, ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕ್ರಮವು ಜನವರಿ 27ರಿಂದ ನಡೆಯಲಿರುವ ಎರಡನೇ ಹಂತದ ರಾಜ್ಯಮಟ್ಟದ ಪಿಯು ಪರೀಕ್ಷೆಗಳಿಂದ ಜಾರಿಗೆ ಬರಲಿದೆ. ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಗಳು ಮೊಬೈಲ್ ಮೂಲಕ ಸೋರಿಕೆಯಾಗುವುದನ್ನು ತಡೆಯಲು ಈ ನಿಷೇಧವನ್ನು ಹೇರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪರೀಕ್ಷಾ ಕರ್ತವ್ಯದಲ್ಲಿರುವ ಶಿಕ್ಷಕರು, ಪ್ರಾಂಶುಪಾಲರು ಸೇರಿದಂತೆ ಎಲ್ಲ ಸಿಬ್ಬಂದಿಯ ಮೊಬೈಲ್ ಬಳಕೆಗೆ ಕಡಿವಾಣ ಹಾಕಲಾಗುತ್ತದೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!