ಶಬರಿಮಲೆ ಚಿನ್ನ ಕಳವು ಪ್ರಕರಣ: ಮುರಾರಿ ಬಾಬುಗೆ ಜಾಮೀನು

Picture of Savistara

Savistara

Bureau Report

ಕೊಲ್ಲಂ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣಗಳ ಆರೋಪಿ, ಟಿಡಿಬಿ ಮಾಜಿ ಅಧಿಕಾರಿ ಮುರಾರಿ ಬಾಬು ಅವರಿಗೆ ನ್ಯಾಯಾಲಯವೊಂದು ತಾಂತ್ರಿಕ ಕಾರಣಗಳ ಆಧಾರದಲ್ಲಿ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ವಿಶೇಷ ತನಿಖಾ ತಂಡ (ಎಸ್‌ಐಟಿ) ಬಾಬು ಅವರನ್ನು ಬಂಧಿಸಿ 90 ದಿನಗಳು ಕಳೆದರೂ ಎರಡು ಪ್ರಕರಣಗಳ ಕುರಿತು ಆರೋಪ ಪಟ್ಟಿ ಸಲ್ಲಿಸಿಲ್ಲ. ಈ ತಾಂತ್ರಿಕ ಅಂಶವನ್ನು ಆಧಾರವಾಗಿಟ್ಟುಕೊಂಡು ಕೊಲ್ಲಂ ವಿಚಕ್ಷಣಾ ನ್ಯಾಯಾಲಯದ ನ್ಯಾಯಧೀಶರಾದ ಮೋಹಿತ್ ಸಿ.ಎಸ್‌ ಅವರು ಜಾಮೀನು ಮಂಜೂರು ಮಾಡಿದ್ದಾರೆ.ಬಾಬು ಅವರು ದ್ವಾರಪಾಲಕ ಮೂರ್ತಿಗಳ ಚಿನ್ನ ಕಳವು ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದು, ಶ್ರೀಕೋವಿಲ್ ಬಾಗಿಲು ಚೌಕಟ್ಟಿನ ಚಿನ್ನ ಕಳವು ಪ್ರಕರಣದಲ್ಲಿ ಆರನೇ ಆರೋಪಿಯಾಗಿದ್ದಾರೆ.ಚಿನ್ನ ಕಳವಿಗೆ ಪಿತೂರಿ ನಡೆಸಿದ ಆರೋಪದಡಿ ಬಾಬು ಅವರನ್ನು ಕಳೆದ ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು. ಆ ವೇಳೆ ಅವರು ಟಿಡಿಬಿಯ ಉಪ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!