ಬಿಜೆಪಿ ಮಡಿಲಿಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್

Picture of Savistara

Savistara

Bureau Report

ಕಿನ್ನಿಗೋಳಿ: ಕಟೀಲು, ಕಿನ್ನಿಗೋಳಿ ಮತ್ತು ಮೆನ್ನಬೆಟ್ಟುಪಂಚಾಯತ್ ಗಳು ಸೇರಿ ಮೇಲ್ದರ್ಜೆಗೇರಿದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ನ ಮೊದಲ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಬಿಜೆಪಿ ಮಡಿಲಿಗೆ ಸೇರಿದೆ ಹಿನ್ನೆಲೆಯಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸುವ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದ ಸಂಸದ ಬ್ರಿಜೇಶ್ ಚೌಟ ಮಾತನಾಡಿ, ನರೇಂದ್ರ ಮೋದಿಯವರ ಕಲ್ಪನೆಯಂತೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯ ಮಾಡುತ್ತೇವೆ ಎಂದರು.

ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಕಿನ್ನಿಗೋಳಿ ಮತ್ತು ಬಜಪೆಯನ್ನು ಅಭಿವೃದ್ಧಿಪಡಿದಬೇಕು ಎಂಬ ಉದ್ದೇಶದಿಂದ ಎರಡೂ ಪಂಚಾಯತ್ ಗಳನ್ನು ಮೇಲ್ದರ್ಜೆಗೇರಿಸಿದ್ದೇವೆ, ಈ ಮೂಲಕ ಎರಡೂ ಪಂಚಾಯತ್ ಗಳನ್ನು ಅಭಿವೃದ್ದಿ ಪಡಿಸಲಾಗುತ್ತಿದೆ ಎಂದರು. ಈ ಸಂದರ್ಭಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!