ಸರ್ಕಾರದ ವಿರುದ್ಧ ಮತ್ತೆ ತೊಡೆತಟ್ಟಿದ ರಾಜ್ಯಪಾಲರು: ಗಣರಾಜ್ಯೋತ್ಸವ ಭಾಷಣ ಓದಲೂ ಹಿಂದೇಟು

Picture of Savistara

Savistara

Bureau Report

ಬೆಂಗಳೂರು: ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದೆ. ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ನಡೆದ ಗದ್ದಲದ ಬೆನ್ನಲ್ಲೇ, ಇದೀಗ ಗಣರಾಜ್ಯೋತ್ಸವದ ಭಾಷಣವೇ ಹೊಸ ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಹೆಚ್ಚಾಗಿದೆ.ಸಂಪ್ರದಾಯದಂತೆ ಗಣರಾಜ್ಯೋತ್ಸವದಂದು ರಾಜ್ಯಪಾಲರು ಓದುವ ಭಾಷಣವನ್ನು ರಾಜ್ಯ ಸರ್ಕಾರವೇ ಸಿದ್ಧಪಡಿಸಿ ನೀಡುತ್ತದೆ. ಆದರೆ ಈ ಬಾರಿ ಸರ್ಕಾರ ಸಿದ್ಧಪಡಿಸಿರುವ ಭಾಷಣದಲ್ಲಿ ಕೇಂದ್ರ ಸರ್ಕಾರದ ನೀತಿಗಳ ಕುರಿತು ತೀವ್ರ ಟೀಕೆಗಳಿರುವುದು ರಾಜ್ಯಪಾಲರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ತೆರಿಗೆ ಅನ್ಯಾಯ, ಅನುದಾನ ಹಂಚಿಕೆಯಲ್ಲಿ ತಾರತಮ್ಯ, ಹಾಗೂ ಮಲತಾಯಿ ಧೋರಣೆ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಈ ಭಾಷಣದಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.ಈ ಅಂಶಗಳು ಕೇಂದ್ರ ಸರ್ಕಾರವನ್ನು ನೇರವಾಗಿ ಟೀಕಿಸುವಂತಿರುವುದರಿಂದ, ‘ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುವ ಅಂಶಗಳಿದ್ದರೆ ಅದನ್ನು ಓದಲು ಸಾಧ್ಯವಿಲ್ಲ. ಸರ್ಕಾರ ತಿದ್ದುಪಡಿ ಮಾಡದಿದ್ದರೆ, ನಾನೇ ಸಿದ್ಧಪಡಿಸಿದ ಭಾಷಣವನ್ನು ಓದುತ್ತೇನೆ’ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜ್ಯಪಾಲರ ಈ ಪಟ್ಟು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!