ಸ್ವಾತಂತ್ರ್ಯ ಹೋರಾಟಗಾರರು ಕಂಡ ಕನಸುಗಳು ಸಂವಿಧಾನದ ಮೂಲಕ ಸಾಕಾರಗೊಂಡಿದೆ. ದೇಶದ ಸಂವಿಧಾನದ ಮೌಲ್ಯಗಳನ್ನು ಅರಿತು ನಾವೆಲ್ಲರೂ ನಡೆಯಬೇಕು. ಹಾಗೂ ಮುಂದಿನ ಪೀಳಿಗೆಗೆ ಹಸ್ತಾಂತರ ಮಾಡಬೇಕು” ಎಂದು ಸುಳ್ಯ ತಹಶೀಲ್ದಾರ್ ಮಂಜುಳ ಹೇಳಿದರು.

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ, ಪಥ ಸಂಚಲನದ ಗೌರವ ಸ್ವೀಕರಿಸಿ ಅವರು ಮಾತನಾಡಿದರು.ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. “ಈ ದೇಶದ ಸಂವಿಧಾನದಡಿಯಲ್ಲಿ ನಾವೆಲ್ಲರೂ ನಡೆಯುತಿದ್ದೇವೆ.

ಗೌರವಿಸುತಿದ್ದೇವೆ. ಸಂವಿಧಾನ ಬಂದುದರಿಂದ ನಾನು ಶಾಸಕಿ ಆಗುವಂತಾಯಿತು. ಹಲವರಿಗೆ ಉನ್ನತ ಅವಕಾಶಗಳು ದೊರೆತಿದೆ” ಎಂದು ಹೇಳಿದರು. ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್, ಸುಳ್ಯ ಸೂಡಾ ಅಧ್ಯಕ್ಷ ಕೆ.ಎಂ.ಮುಸ್ತಫಾ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಐಎಫ್ ಎಸ್ ಪ್ರೊಬೆಷನರಿ ಸಂಕೇತ್ ವಿಜಯ್ ಅಧೋ ವೇದಿಕೆಯಲ್ಲಿ ಇದ್ದರು. ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಸುಳ್ಯ ನ.ಪಂ. ಮುಖ್ಯಾಧಿಕಾರಿ ಬಸವರಾಜ್, ಸುಳ್ಯಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ., ಸುಳ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ನಿತೀನ್ ಪ್ರಭು ವೇದಿಕೆಯಲ್ಲಿ ಇದ್ದರು.

ಅತ್ಯುತ್ತಮ ಸೇವಾ ಪುರಸ್ಕಾರ : ಗಣರಾಜ್ಯೋತ್ಸವ ಸಮಾರಂಭದಲ್ಲಿ 5ಮಂದಿ ಸರಕಾರಿ ನೌಕರರಿಗೆ ಅತ್ಯುತ್ತಮ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಇಸುಬು ಎ., ಸುಳ್ಯ ಕಂದಾಯ ನಿರೀಕ್ಷಕ ಅವಿನ್ ಕುಮಾರ್, ಪಶುವೈದ್ಯಕೀಯ ಇಲಾಖೆಯ ಹಿರಿಯ ಪಶುವೈದ್ಯಕೀಯ ಪರೀಕ್ಷಕರಾದ ದೇವರಾಜ ಯು.ಬಿ. ಪಂಚಾಯತ್ ರಾಜ್ ಇಲಾಖೆಯಿಂದ ಗ್ರೇಡ್ 2 ಕಾರ್ಯದರ್ಶಿ ವಸಂತ್ ಕುಮಾರ್ ಎಸ್., ಆರೋಗ್ಯ ಇಲಾಖೆಯಿಂದ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಕೆ.ರೇವತಿ ಯವರಿಗೆ ಅತ್ಯುತ್ತಮ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಎಸ್.ಎಸ್.ಎಲ್.ಸಿ. ಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮೂವರು ವಿದ್ಯಾರ್ಥಿಗಳಾದ ಅಮೂಲ್ಯ ಪಿ.ಎಂ., ಅನನ್ಯ ಕೆ.ಎನ್., ಶಿಶ್ಮಾ ಡಿ.ಎಲ್. ತಲಾ 50 ಸಾವಿರ ನಗದು ನೀಡಿ ಗೌರವಿಸಲಾಯಿತು. ಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಚಂದ್ರಮತಿ ಕಾರ್ಯಕ್ರಮ ನಿರೂಪಿಸಿದರು.ಆಕರ್ಷಕ ಮೆರವಣಿಗೆ : ಬೆಳಗ್ಗೆ ಮೈದಾನದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. ಸಭೆಯ ಬಳಿಕ ತಾಲೂಕಿನ ವಿವಿಧ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಿತು.













































