ಆರೋಪಿಗಳು ಪತ್ತೆಯಾಗದಿದ್ದಲ್ಲಿ ಜಾಮೀನು ನೀಡಿದವರ ಮೇಲೂ ಕ್ರಮ: ಪೊಲೀಸ್‌ ಆಯುಕ್ತ ಸುಧೀ‌ರ್ ಕುಮಾ‌ರ್ ರೆಡ್ಡಿ ಎಚ್ಚರಿಕೆ

Picture of Savistara

Savistara

Bureau Report

ಮಂಗಳೂರು: ದರೋಡೆ, ಸುಲಿಗೆ, ಅತ್ಯಾಚಾರ, ಕೋಮು ಹತ್ಯೆಮುಂತಾದ ಗಂಭೀರ ಪ್ರಕರಣಗಳಲ್ಲಿ ಆರೋಪಿಗಳು ಪೊಲೀಸರ ಕೈಗೆ ಸಿಗದೇ ಇದ್ದಲ್ಲಿ ಅವರಿಗೆ ಜಾಮೀನು ನೀಡಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸುಮಾರು 15 ರೌಡಿಗಳನ್ನು ಬಂಧಿಸಿದ್ದು ವಿವಿಧ ಪ್ರಕರಣಗಳಲ್ಲಿ ವಿಚಾರಣೆ ಆರಂಭಿಸಲಾಗಿದೆ. ಪೊಲೀಸರ ಕೈಗೆ ಸಿಗದೇ ಇರುವ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಲು ಕ್ರಮ ಕೈಗೊಳ್ಳಲಾಗಿದೆ. ಅವರಿಗೆ ಜಾಮೀನು ನೀಡಿದವರ ಕಂದಾಯ ದಾಖಲೆಗಳನ್ನು ನ್ಯಾಯಾಲಯದ ಆಸ್ತಿಯೆಂದು ಘೋಷಿಸಲಾಗುವುದು.ಈಗಾಗಲೇ ಓರ್ವ ಆರೋಪಿಯ ಮನೆಯನ್ನು ನ್ಯಾಯಾಲಯದಿಂದ ಹರಾಜು ಮಾಡಲಾಗಿದೆ. ಜಾಮೀನು ನೀಡಿದವರ ಮೇಲೆ ಕ್ರಮ ಕೈಗೊಳ್ಳಲು ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ. ಜಾಮೀನು ನೀಡಿದ 11 ಮಂದಿಗೆ 10 ಸಾವಿರದಿಂದ 2 ಲಕ್ಷ ರೂ. ವರೆಗೆ ದಂಡ ಹಾಕಲಾಗಿದೆ. 17 ಮಂದಿ ಜಾಮೀನುದಾರರ ಆಸ್ತಿಯ ಆರ್ ಟಿಸಿಯಲ್ಲಿ ‘ನ್ಯಾಯಾಲಯದ ಆಸ್ತಿ’ ಎಂದು ನಮೂದಿಸಲಾಗಿದೆ.

ಹೀಗಾಗಿ ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ನೀಡುವವರು ಎಚ್ಚರಿಕೆ ವಹಿಸಬೇಕು. ಅಂತಹ ಆರೋಪಿಗಳ ನ್ಯಾಯಾಲಯಕ್ಕೆ ಹಾಜರುಪಡಿಸುವ ಜವಾಬ್ದಾರಿ ಜಾಮೀನುದಾರರು ವಹಿಸಿಕೊಳ್ಳಬೇಕು ಎಂದು ಕಮಿಷನ‌ರ್ ಸುಧೀರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!