ಬಜೆಟ್ ನಲ್ಲಿ ಮಂಗಳೂರು ದಸರಾಗೆ ವಿಶೇಷ ಆದ್ಯತೆ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ

Picture of Savistara

Savistara

Bureau Report

ಮಂಗಳೂರು ದಸರಾ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ಪ್ರತೀ ವರ್ಷ ದೇಶ-ವಿದೇಶಗಳ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದ್ದು ಇಂತಹ ವೈಭವದ ಹಬ್ಬಕ್ಕೆ ರಾಜ್ಯ ಸರ್ಕಾರವು ಈ ಬಾರಿಯ 2026-27 ನೇ ಸಾಲಿನ ಬಜೆಟ್ ನಲ್ಲಿ ರೂ.5 ಕೋಟಿ ಅನುದಾನ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಮನವಿ ಮಾಡಲಾಯಿತು.ಮೈಸೂರು ನಂತರ ರಾಜ್ಯದಲ್ಲೇ ಅತೀ ಹೆಚ್ಚು ಜನ ಸೇರುವ ಹಬ್ಬ ಮಂಗಳೂರು ದಸರಾ. ನವರಾತ್ರಿಯ ಸಂದರ್ಭದಲ್ಲಿ ಇಲ್ಲಿನ ಪ್ರಸಿದ್ಧ ತೀರ್ಥಕ್ಷೇತ್ರಗಳು ನಾಡಿನ ಭಕ್ತರಿಂದ ತುಂಬಿರುತ್ತವೆ. ರಾಜ್ಯ ಸರ್ಕಾರ ಬಜೆಟ್ ನಲ್ಲಿ 5 ಕೋಟಿ ಘೋಷಣೆ ಮಾಡಿದರೆ ಇನ್ನಷ್ಟು ವಿಜೃಂಭಣೆಯಿಂದ ದಸರಾ ಆಯೋಜನೆ ಮಾಡಬಹುದಾಗಿದ್ದು ಹಬ್ಬದ ಸಂಭ್ರಮವೂ ಹೆಚ್ಚಲಿದೆ. ಆದ್ದರಿಂದ ದಯವಿಟ್ಟು ಈ ಬಗ್ಗೆ ಆದ್ಯತೆಯ ಮೇರೆಗೆ ಕ್ರಮಗೊಳ್ಳಿ ಎಂದು ಮನವಿ.ಈ ಹಿಂದೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ, ದಸರಾ ವೇಳೆ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಿಂದ ಆರಂಭವಾಗಿ ಮಂಗಳಾದೇವಿ, ಉರ್ವ ಮಾರಿಗುಡಿ, ಕಾರ್ ಸ್ಟ್ರೀಟ್, ಡೊಂಗರಕೇರಿ, ಹೀಗೆ ಇಡೀ ನಗರಕ್ಕೆ ಪಾಲಿಕೆ ವತಿಯಿಂದಲೇ ದೀಪಾಲಂಕಾರಗೊಳ್ಳಬೇಕು ಎಂದು ಚಿಂತನೆ ನಡೆಸಿ ಅಂದಿನ ಮೇಯರ್, ಕಾರ್ಪೊರೇಟರ್, ಸ್ಥಾಯಿ ಸಮಿತಿ ಸದಸ್ಯರು ಹಾಗೂ ಜಿಲ್ಲಾಧ್ಯಕ್ಷರ ಸಹಿತ ಎಲ್ಲರ ಸಹಕಾರದೊಂದಿಗೆ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿತ್ತು.ಇದರಿಂದಾಗಿ ದೇವಸ್ಥಾನಗಳಿಗೆ ದೀಪಾಲಂಕಾರಕ್ಕಾಗಿಯೇ ವರ್ಷಕ್ಕೆ ಸುಮಾರು 50 ರಿಂದ 60 ಲಕ್ಷದವರೆಗಿನ ಬಹುದೊಡ್ಡ ಆರ್ಥಿಕ ಹೊರೆಯಾಗುವುದು ತಪ್ಪಿರುವುದು ಈ ಸಂದರ್ಭದಲ್ಲಿ ಸ್ಮರಣೀಯ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!