ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

Picture of Savistara

Savistara

Bureau Report

ಬೆಳ್ತಂಗಡಿ, ಜ.29:*ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತುರ್ತು ದುರಸ್ತಿ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಅಗತ್ಯ ಅನುದಾನವನ್ನು ಒದಗಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು.ಶಾಸಕರ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರವು ಬೆಳ್ತಂಗಡಿ ತಾಲೂಕಿನ 14 ವಿವಿಧ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕಟ್ಟಡ ದುರಸ್ತಿ ಹಾಗೂ ಶೌಚಾಲಯಗಳ ಅಭಿವೃದ್ಧಿಗಾಗಿ ಒಟ್ಟು ರೂ.57.93 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿದೆ.

ಈ ಅನುದಾನದಿಂದ ಶಾಲೆಗಳ ಮೂಲಭೂತ ಸೌಕರ್ಯಗಳು ಮತ್ತಷ್ಟು ಸುಧಾರಣೆಯಾಗಲಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಹಾಗೂ ಸುರಕ್ಷಿತ ಶಿಕ್ಷಣ ವಾತಾವರಣ ಕಲ್ಪಿಸಲು ಸಹಕಾರಿಯಾಗಲಿದೆ.ಶಾಸಕರ ಮನವಿಗೆ ಸ್ಪಂದಿಸಿ ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಶಿಕ್ಷಣ ಸಚಿವರಿಗೆ ತಾಲೂಕಿನ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಶಾಸಕ ಹರೀಶ್ ಪೂಂಜ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!