ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ-ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಭಾ.ಆ.ಸೇ.,ರವರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು. ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಅಧಿಕಾರಿ-ನೌಕರರು ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸುವುದು ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸುವುದು.ಖಾದಿ ಗ್ರಾಮೋದ್ಯೋಗ ಮಂಡಳಿಯು ಹಾಲಿ ನೀಡುತ್ತಿರುವ ರಿಯಾಯಿತಿಯ ಹೊರತಾಗಿ ಅಧಿಕಾರಿ-ನೌಕರರಿಗೆ ಶೇ. 5% ಹೆಚ್ಚುವರಿ ರಿಯಾಯಿತಿ ನೀಡುವುದು.ಪುರುಷ ನೌಕರರು ಖಾದಿ ಬಟ್ಟೆಯ ಶರ್ಟ್-ಪ್ಯಾಂಟ್ / ಒವರ್ ಕೋಟ್ ಹಾಗೂ ಇತರೆ ಶಿಸ್ತಿನ ಉಡುಗೆಗಳು.ಮಹಿಳಾ ನೌಕರರು ಖಾದಿ ಹಾಗೂ ಖಾದಿ ಸಿಲ್ಕ್ ಬಟ್ಟೆಯ ಸೀರೆ/ ಚೂಡಿದಾರ್ ಇತರೆ ಶಿಸ್ತಿನ ಉಡುಗೆಗಳು.ಉದ್ದೇಶಿತ ಈ ಯೋಜನೆಯನ್ನು ಸರ್ಕಾರಿ ನೌಕರರ ದಿನಾಚರಣೆ ಎ. 21ರಂದು ಚಾಲನೆ ನೀಡುವುದು.ಈ ಸಂಬಂಧ ಸರ್ಕಾರ ಅಧಿಕೃತ ಸುತ್ತೋಲೆ ಹೊರಡಿಸಲಿದೆ.ಸದರಿ ಸಭೆಯಲ್ಲಿಯೇ;> ಎಂ.ಎಸ್.ಐ.ಎಲ್. ಸಂಸ್ಥೆಯ ಮೂಲಕ ಸೇನಾ ಕ್ಯಾಂಟೀನ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ದಿನಬಳಕೆ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಪೂರೈಸಲು “ಸರ್ಕಾರಿ ನೌಕರರ ಕ್ಯಾಂಟೀನ್” ಪ್ರಾರಂಭಿಸಲು 2026-27ನೇ ಸಾಲಿನ ಆಯ-ವ್ಯಯದಲ್ಲಿ ಈ ಯೋಜನೆಯನ್ನು ಘೋಷಣೆ ಮಾಡುವುದು.> ಕೆ.ಎಸ್.ಐ.ಸಿ. ಸಂಸ್ಥೆಯು ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳು ಖರೀದಿಸುವ ರೇಷ್ಮೆ ಸೀರೆ ಮತ್ತು ರೇಷ್ಮೆ ವಸ್ತ್ರಗಳಿಗೆ ಹೆಚ್ಚುವರಿ ಶೇ.5% ವಿಶೇಷ ರಿಯಾಯಿತಿ ನೀಡುತ್ತಿರುವ ಮಾದರಿಯಲ್ಲೇ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ-ನೌಕರರಿಗೂ ಹೆಚ್ಚುವರಿ ಶೇ. 5% ವಿಶೇಷ ರಿಯಾಯಿತಿ ನೀಡುವುದು.ಮೇಲ್ಕಂಡ ಹೇಳಿಕೆಯನ್ನು ತಮ್ಮ ಪತ್ರಿಕೆ/ಸುದ್ದಿ ಸಂಸ್ಥೆಯಲ್ಲಿ ಪ್ರಕಟಿಸಿ ವ್ಯಾಪಕ ಪ್ರಚಾರಪಡಿಸಲು ಕೋರಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ – ಎ.21 ಸರ್ಕಾರಿ ನೌಕರರ ದಿನಾಚರಣೆಯಿಂದ ಜಾರಿ…!!!
Savistara
Bureau Report
[t4b-ticker]












































