ಜನ್ಮದಿನಾಚರಣೆ, ವಿವಾಹ ವಾರ್ಷಿಕೋತ್ಸವ: ಪೊಲೀಸರಿಗೆ ರಜೆ ಮಂಜೂರು-ಡಿಜಿಪಿ ನಿರ್ದೇಶನ

Picture of Savistara

Savistara

Bureau Report

ಬೆಂಗಳೂರು: ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳಜನ್ಮದಿನಾಚರಣೆ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ಮಂಜೂರು ಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಅವರು ಎಲ್ಲ ಘಟಕದ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ತಮ್ಮ ವೈಯಕ್ತಿಕ ಕಾರ್ಯಕ್ರಮಗಳನ್ನು ಬದಿಗೊತ್ತಿ ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಗೊಳಿಸುವ ಕೆಲಸದಲ್ಲಿ ಪೊಲೀಸರು ಮಗ್ನರಾಗಿರುತ್ತಾರೆ. ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು, ತಮ್ಮ ಜನ್ಮದಿನಾಚರಣೆ ಹಾಗೂ ವಿವಾಹ ವಾರ್ಷಿಕೋತ್ಸವದಂತಹ ಕಾರ್ಯಕ್ರಮ ಆಚರಿಸುವುದು ಬಹಳ ಮಹತ್ವದ್ದು.ಈ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚತನಗೊಳ್ಳಲು, ಕುಟುಂಬದ ಜತೆಗೆ ಸಂಭ್ರಮದಿಂದ ಸಮಯ ಕಳೆಯುವುದಕ್ಕೆ ಸಾಧ್ಯವಾಗಲಿದೆ. ಕರ್ತವ್ಯ ಹಾಗೂ ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಪಾಡಿಕೊಳ್ಳಲು ಸಹಾಯ ಆಗುತ್ತದೆ. ಮನೋಬಲವು ವೃದ್ಧಿ ಆಗುತ್ತದೆ. ಒತ್ತಡ ಕಡಿಮೆಯಾಗಿ ಒಟ್ಟಾರೆ ಕೆಲಸದ ತೃಪ್ತಿ ಉತ್ಪಾದಕತೆ ಹೆಚ್ಚಿಸುತ್ತದೆ ಎಂದು ಸಲೀಂ ಆದೇಶದಲ್ಲಿ ತಿಳಿಸಿದ್ದಾರೆ.ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಜನ್ಮದಿನಾಚರಣೆ ಹಾಗೂ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರಿದಲ್ಲಿ ತಪ್ಪದೇ ರಜೆ ಮಂಜೂರು ಮಾಡಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!