ನಾಳೆ ಸುಳ್ಯದಲ್ಲಿ ಪವರ್ ಕಟ್

Picture of Savistara

Savistara

Bureau Report

ಸುಳ್ಯ: ತುರ್ತು ನಿಯತಕಾಲಿಕ ನಿರ್ವಹಣೆಯ ಹಿನ್ನಲೆಯಲ್ಲಿ ಸುಳ್ಯ ಉಪವಿಭಾಗದಲ್ಲಿ ಜ.31ರಂದು ಶನಿವಾರ ದಿನಪೂರ್ತಿ ವಿದ್ಯುತ್ ಕಡಿತ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿದೆ. ಇದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೋಡಿಕಾನ, ಕೊಲ್ವಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10ರಿಂದ ರಿಂದ ಸಜಜೆ 5ರ ತನಕ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. ಈ ವಾರದಲ್ಲಿ ಎರಡನೇ ಬಾರಿ ದಿನಪೂರ್ತಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ಮಂಗಳವಾರ ದಿನಪೂರ್ತಿ ವಿದ್ಯುತ್ ಕಡಿತ ಮಾಡಲಾಗಿತ್ತು. ಬೆಳಿಗ್ಗೆ 10ಗಂಟೆಯಿಂದ ರಾತ್ರಿ 9ಗಂಟೆಯ ತನಕ ವಿದ್ಯುತ್ ಕಡಿತಗೊಂಡಿತ್ತು.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!