ಎನ್‌ಸಿಪಿ ನಾಯಕರನ್ನು ಭೇಟಿಯಾದ ಸುನೇತ್ರಾ: ಡಿಸಿಎಂ ಆಗಿ ಸಂಜೆ ಪ್ರಮಾಣವಚನ ಸಾಧ್ಯತೆ

Picture of Savistara

Savistara

Bureau Report

ಮುಂಬೈ: ಶಾಸಕಾಂಗ ಪಕ್ಷದ ಸಭೆಗೂ ಮುನ್ನ, ಸುನೇತ್ರಾ ಪವಾರ್ ಅವರು ಎನ್‌ಸಿಪಿ ನಾಯಕರಾದ ಪ್ರಫುಲ್ ಪಟೇಲ್ ಮತ್ತು ಸುನಿಲ್ ತತ್ಕರೆ ಅವರನ್ನು ಶನಿವಾರ ಭೇಟಿಯಾಗಿದ್ದಾರೆ.

ಎನ್‌ಸಿಪಿಯ ಕಾರ್ಯಾಧ್ಯಕ್ಷ ಪಟೇಲ್ ಮತ್ತು ರಾಜ್ಯ ಘಟಕದ ಅಧ್ಯಕ್ಷ ತತ್ಕರೆ ಅವರು ಸುನೇತ್ರಾ ಪವಾರ್ ಅವರೊಂದಿಗೆ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೇವೇಂದ್ರ ಫಡಣವೀಸ್ ನೇತೃತ್ವದ ಮಹಾಯುತಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾಗಿದ್ದ ಅಜಿತ್ ಪವಾರ್, ಬಾರಾಮತಿಯಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ.ಅಜಿತ್‌ ಪವಾ‌ರ್ ನಿಧನದಿಂದ ತೆರವಾದ ಸ್ಥಾನಕ್ಕೆ, ಅವರ ಪತ್ನಿ ಸುನೇತ್ರಾ ಪವಾ‌ರ್ ಅವರು ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿಯಾಗಿ ಇಂದು ಶನಿವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

ಪ್ರಸ್ತುತ ರಾಜ್ಯಸಭಾ ಸದಸ್ಯೆಯಾಗಿರುವ ಸುನೇತ್ರಾ ಅವರು ರಾಜ್ಯದ ಮೊದಲ ಮಹಿಳಾ ಉಪ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!