ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ಗೆ ಸಿ.ಟಿ.ರವಿ ಅಧ್ಯಕ್ಷ

Picture of Savistara

Savistara

Bureau Report

ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ (ಡಿಸಿಸಿ) ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಭಾನುವಾರ ಆಯ್ಕೆಯಾದರು.

13 ನಿರ್ದೇಶಕರಿರುವ ಡಿಸಿಸಿ ಬ್ಯಾಂಕ್‌ನಲ್ಲಿ ಬಹುತೇಕರು ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ನಿರ್ದೇಶಕರಿದ್ದರು. ವಿಧಾನ ಪರಿಷತ್ ಸದಸ್ಯ (ಜೆಡಿಎಸ್) ಎಸ್.ಎಲ್. ಭೋಜೇಗೌಡ, ಬಿಜೆಪಿಯ ಮಾಜಿ ಶಾಸಕರಾದ ಡಿ.ಎಸ್. ಸುರೇಶ್, ಬೆಳ್ಳಿ ಪ್ರಕಾಶ್ ಕೂಡ ನಿರ್ದೇಶಕರಾಗಿದ್ದರು. ಶನಿವಾರ ರಾತ್ರಿ ನಡೆದ ಮೈತ್ರಿಕೂಟದ ಪ್ರಮುಖರ ಸಭೆಯಲ್ಲಿ ಸಿ.ಟಿ. ರವಿ ಅವರನ್ನೇ ಅಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಲಾಗಿತ್ತು.ಅದರಂತೆ ಭಾನುವಾರ ಬೆಳಿಗ್ಗೆ ಅಧ್ಯಕ್ಷ ಸ್ಥಾನಕ್ಕೆ ಸಿ.ಟಿ.ರವಿ ನಾಮಪತ್ರ ಸಲ್ಲಿಸಿದ್ದರು. ಅವರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಫೋಷಣೆ ಮಾಡಿದರು. ಉಪಾಧ್ಯಕ್ಷರಾಗಿ ಎಚ್‌.ಕೆ. ದಿನೇಶ್ ಹೊಸೂರು ಅವರನ್ನು ಆಯ್ಕೆ ಮಾಡಲಾಯಿತು. ಬಿಜೆಪಿ ಕೊಪ್ಪ ಮಂಡಲ ಅಧ್ಯಕ್ಷರಾಗಿರುವ ಇವರು ಕಡೂರು ಶಾಸಕ ಕೆ.ಎಸ್.ಆನಂದ್‌ ವಿರುದ್ಧ ಎಲ್ಲಾ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ(ಟಿಎಪಿಸಿಎಂಎಸ್) ಕ್ಷೇತ್ರದಿಂದ ಜಯ ಸಾಧಿಸಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!