ಸಂಸತ್‌ನಲ್ಲಿ ಸಂಘರ್ಷ: ಸ್ಪೀಕರ್ ಪೀಠಕ್ಕೆ ಕಾಗದ ಎಸೆದ 8 ಸಂಸದರು ಅಮಾನತು!

Picture of Savistara

Savistara

Bureau Report

ಲೋಕಸಭೆಯ ಬಜೆಟ್ ಅಧಿವೇಶನದಲ್ಲಿ ಇಂದು ತೀವ್ರ ಹೈಡ್ರಾಮಾ ನಡೆದಿದ್ದು, ಸ್ಪೀಕರ್ ಪೀಠದ ಮೇಲೆ ಕಾಗದ ಹರಿದು ಎಸೆದ ಆರೋಪದ ಮೇಲೆ ಎಂಟು ಮಂದಿ ವಿರೋಧ ಪಕ್ಷದ ಸಂಸದರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಲಾಗಿದೆ.ಮಧ್ಯಾಹ್ನ 3 ಗಂಟೆಗೆ ಸದನ ಆರಂಭವಾದಾಗ ವಿಪಕ್ಷ ಸದಸ್ಯರು ವಿವಿಧ ಬೇಡಿಕೆಗಳಿಗಾಗಿ ಗದ್ದಲ ಆರಂಭಿಸಿದರು. ಈ ವೇಳೆ ಸಂಸದರು ಸ್ಪೀಕ‌ರ್ ಪೀಠದತ್ತ ಕಾಗದಗಳನ್ನು ಹರಿದು ಎಸೆದರು. ಈ ನಡವಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಸದಸ್ಯರನ್ನು ಅಮಾನತುಗೊಳಿಸುವ ಪ್ರಸ್ತಾವನೆಯನ್ನು ಮಂಡಿಸಿದರು. ಧ್ವನಿ ಮತದ ಮೂಲಕ ಈ ಪ್ರಸ್ತಾವನೆಗೆ ಅಂಗೀಕಾರ ದೊರೆಯಿತು.

ಒಟ್ಟು 8 ಸಂಸದರ ಮೇಲೆ ಕ್ರಮ ಕೈಗೊಳ್ಳಲಾಗಿದ್ದು, ಅವರಲ್ಲಿ 7 ಮಂದಿ ಕಾಂಗ್ರೆಸ್ ಹಾಗೂ ಒಬ್ಬರು ಸಿಪಿಎಂ ಪಕ್ಷಕ್ಕೆ ಸೇರಿದವರಾಗಿದ್ದಾರೆ.ಮಾಣಿಕ್ಕಂ ಟ್ಯಾಗೋರ್, ಗುರ್ಜೀತ್ ಸಿಂಗ್ ಔಜ್ಞಾ, ಅಮರಿಂದ‌ರ್ ಸಿಂಗ್ ರಾಜಾ ವಾರಿಂಗ್, ಕಿರಣ್ ಕುಮಾ‌ರ್ ರೆಡ್ಡಿ, ಹಿಬಿ ಈಡನ್, ಡೀನ್ ಕುರಿಯಾಕೋಸ್ ಮತ್ತು ಪ್ರಶಾಂತ್ ಪಡೋಲೆ.ಸದನದ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನಿಯಮ 374ರ ಅಡಿಯಲ್ಲಿ ಸ್ಪೀಕ‌ರ್ ಈ ಕ್ರಮ ಜರುಗಿಸಿದ್ದಾರೆ. ಅಮಾನತುಗೊಂಡ ಸದಸ್ಯರು ಇಡೀ ಬಜೆಟ್ ಅಧಿವೇಶನದ ಅವಧಿಯಲ್ಲಿ ಸದನದ ಚರ್ಚೆಗಳಲ್ಲಿ ಭಾಗವಹಿಸುವಂತಿಲ್ಲ ಮತ್ತು ಸದನದಲ್ಲಿ ಉಪಸ್ಥಿತರಿರುವಂತಿಲ್ಲ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!