43 ಶಾಸಕರಿಗೆ ನಿಗಮ-ಮಂಡಳಿಗಳ ಅಧ್ಯಕ್ಷಗಿರಿ: ಕಾನೂನು ಉಲ್ಲಂಘನೆಯ ವರದಿಗೆ ಸೂಚನೆ

Picture of Savistara

Savistara

Bureau Report

ಬೆಂಗಳೂರು: ನಿಗಮ ಮಂಡಳಿಗಳ ಅಧ್ಯಕ್ಷರಾಗಿ ಶಾಸಕರನೇಮಕದಲ್ಲಿ ಸಂವಿಧಾನ ಹಾಗೂ ಕಾನೂನು ಉಲ್ಲಂಘನೆಯಾಗಿರುವ ಬಗ್ಗೆ ಅಗತ್ಯ ದಾಖಲೆಗಳೊಂದಿಗೆ ವಾಸ್ತವ ವರದಿಯನ್ನು ಸಲ್ಲಿಸುವಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

‘ಸರ್ಕಾರವು ವಿಧಾನಸಭೆ ಹಾಗೂ ವಿಧಾನ ಪರಿಷತ್‌ನ 43 ಶಾಸಕರನ್ನು ಹಲವು ನಿಗಮ ಮತ್ತು ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಈ ಎಲ್ಲ ನೇಮಕಗಳು ಸಂವಿಧಾನದ ಪರಿಚ್ಛೇದ 164(5) ಮತ್ತು 195ರ ಉಲ್ಲಂಘನೆಯಾಗಿದ್ದು, ಕಾನೂನಿಗೂ ವಿರುದ್ಧವಾಗಿವೆ. ನೇಮಕವಾಗಿರುವ ಎಲ್ಲರೂ ಕಾಯ್ದೆ ಪ್ರಕಾರ ಅನರ್ಹತೆ ವ್ಯಾಪ್ತಿಗೆ ಬರುತ್ತಾರೆ ಎಂದು ಸೂರಿ ಪಾಯಲ್ ವಿವರವಾದ ಮನವಿಯನ್ನು ನೀಡಿದ್ದಾರೆ’ ಎಂದು ರಾಜ್ಯಪಾಲರ ಪತ್ರ ಉಲ್ಲೇಖಿಸಿದೆ.’ಸಂವಿಧಾನದ ಪರಿಚ್ಛೇದ 192 (1) ಪ್ರಕಾರ, ಶಾಸಕರನ್ನು ಅನರ್ಹಗೊಳಿಸುವ ಬಗ್ಗೆ ಭಾರತೀಯ ಚುನಾವಣಾ ಆಯೋಗಕ್ಕೆ ಉಲ್ಲೇಖಿಸಬೇಕು. ಅಲ್ಲದೆ, ಸಂವಿಧಾನದ ಪರಿಚ್ಛೇದ 191 (1) (ಎ) ಪ್ರಕಾರ ಶಾಸಕರ ಅನರ್ಹತೆ ಬಗ್ಗೆ ಚುನಾವಣಾ ಆಯೋಗದ ಅಭಿಪ್ರಾಯ ಪಡೆಯಬೇಕು ಎಂದು ಸೂರಿ ಅವರು ಮನವಿ ಮಾಡಿದ್ದಾರೆ. ಹೀಗಾಗಿ, ಈ ಎಲ್ಲ ವಿಚಾರವನ್ನು ಪರಿಗಣಿಸಿ ರಾಜ್ಯ ಸರ್ಕಾರದಿಂದ ವಾಸ್ತವ ವರದಿಯನ್ನು ನೀಡಬೇಕು. ಅದರೊಂದಿಗೆ ಎಲ್ಲ ಅಗತ್ಯ ದಾಖಲೆಗಳನ್ನೂ ಒದಗಿಸಬೇಕು’ ಎಂದು ರಾಜ್ಯಪಾಲರು ಸರ್ಕಾರಕ್ಕೆ ಸೂಚಿಸಿದ್ದಾರೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಅಧಿಕೃತವಾಗಿ 32 ಸಚಿವರಿದ್ದರೆ, ‘ಸಚಿವ ಸ್ಥಾನಮಾನ’ ಪಡೆದಿರುವವರ ಸಂಖ್ಯೆ ದುಪ್ಪಟ್ಟಾಗಿದೆ. ನಿಗಮ ಮಂಡಳಿಗಳ ಅಧ್ಯಕ್ಷರು-ಉಪಾಧ್ಯಕ್ಷರು ಸೇರಿದಂತೆ ಒಟ್ಟು 76 ಮಂದಿಗೆ ‘ಸಚಿವರ ಸ್ಥಾನಮಾನ’ದ ‘ಗ್ಯಾರಂಟಿ’ಯನ್ನು ಕಾಂಗ್ರೆಸ್‌ ಸರ್ಕಾರ ದಯಪಾಲಿಸಿದೆ’ ಎಂಬ ವಿವರಿಗಳಿದ್ದ, ‘ಸಂಪುಟ’ಕ್ಕಿಂತ ಸಚಿವ ದರ್ಜೆ ಭಾರ’ ಶೀರ್ಷಿಕೆಯಡಿ ‘ಪ್ರಜಾವಾಣಿ’ಯ 2025ರ ಅಕ್ಟೋಬ‌ರ್ 16ರಂದು ವಿಶೇಷ ವರದಿ ಪ್ರಕಟಿಸಿತ್ತು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!