ತೈಲ ಖರೀದಿ ಸ್ಥಗಿತಗೊಳಿಸುವ ಕುರಿತು ಭಾರತ ಯಾವುದೇ ಸಂದೇಶ ನೀಡಿಲ್ಲ: ರಷ್ಯಾ

Picture of Savistara

Savistara

Bureau Report

ಮಾಸ್ಕೊ: ಕಚ್ಚಾ ತೈಲ ಖರೀದಿ ಸ್ಥಗಿತಗೊಳಿಸುವ ಕುರಿತು ಭಾರತದಿಂದ ಯಾವುದೇ ರೀತಿಯ ಸಂದೇಶ ಸ್ವೀಕರಿಸಿಲ್ಲ ಎಂದು ರಷ್ಯಾ ಸ್ಪಷ್ಟಪಡಿಸಿದೆ.

ರಷ್ಯಾ ಸರ್ಕಾರದ ವಕ್ತಾರ ದಿಮಿಟ್ರಿ ಪೆಸ್ಕೋವ್ ಸ್ಪಷ್ಟನೆ ನೀಡಿದ್ದು, ಈ ವಿಚಾರವಾಗಿ ಭಾರತದಿಂದ ಇದುವರೆಗೂ ಅಧಿಕೃತ ಹೇಳಿಕೆ ಹೊರ ಬಿದ್ದಿರುವ ಕುರಿತು ನಮಗೆ ತಿಳಿದಿಲ್ಲ’ ಎಂದು ವಿವರಿಸಿದ್ದಾರೆ.’ಸಾಧ್ಯವಿರುವ ಎಲ್ಲ ರೀತಿಯಲ್ಲೂ ಭಾರತದ ಜೊತೆಗಿನ ಸಂಬಂಧವನ್ನು ಮುಂದುವರಿಸಲು ರಷ್ಯಾ ನಿರ್ಧರಿಸಿದೆ’ ಎಂದು ಪೆಸ್ಕೋವ್ ಹೇಳಿದ್ದಾರೆ ಎಂದು ರಷ್ಯಾದ ಮಾಧ್ಯಮಗಳು ವರದಿ ಮಾಡಿವೆ.’ಕಚ್ಚಾ ತೈಲ ಖರೀದಿ ಒಪ್ಪಂದಗಳನ್ನು ರದ್ದುಗೊಳಿಸುವ ಕುರಿತು ಭಾರತದ ತೈಲ ಸಂಸ್ಕರಣಾ ಕೇಂದ್ರಗಳಿಂದ ಯಾವುದೇ ಮಾಹಿತಿ ಬಂದಿಲ್ಲ’ ಎಂದು ರಷ್ಯಾದ ಇಂಧನ ಸಚಿವಾಲಯವು ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.

ಭಾರತವು ತನ್ನ ಬೇಡಿಕೆಯ ಶೇಕಡ 88ರಷ್ಟು ಕಚ್ಚಾತೈಲವನ್ನು ವಿದೇಶದಿಂದಲೇ ಖರೀದಿಸುತ್ತಿದೆ. 2022ರಲ್ಲಿ ಉಕ್ರೇನ್ ಮೇಲೆ ಯುದ್ಧ ಆರಂಭಗೊಂಡ ನಂತರ ರಷ್ಯಾದಿಂದ ಕಚ್ಚಾತೈಲ ಖರೀದಿಸುತ್ತಿದ್ದ ವಿಶ್ವದ ಮೂರನೇ ಅತೀ ದೊಡ್ಡ ರಾಷ್ಟ್ರವಾಗಿ ಭಾರತ ಹೊರಹೊಮ್ಮಿತ್ತು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!