ವಿಧಾನಸಭೆಯಲ್ಲಿ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಿದ ಸಿದ್ದು ಸರಕಾರ!

Picture of Savistara

Savistara

Bureau Report

ರಾಜ್ಯ ಸರ್ಕಾರ ಬುಧವಾರ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ತೀವ್ರ ವಿರೋಧದ ನಡುವೆಯೂ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸುವಂತೆ ಮತ್ತು ಯುಪಿಎ ಯುಗದ ಮನರೇಗಾವನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ನಿರ್ಣಯ ಅಂಗೀಕರಿಸಿದೆ.ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ನಿರ್ಣಯ ಮಂಗಳವಾರ ಮಂಡಿಸಿದ್ದರು. ಕರ್ನಾಟಕದ ಗ್ರಾಮೀಣ ಜನರ ಬದುಕುವ ಹಕ್ಕನ್ನು ರಕ್ಷಿಸುವ ದೃಷ್ಟಿಯಿಂದ, ಕೇಂದ್ರ ಸರ್ಕಾರವನ್ನು ತಕ್ಷಣವೇ ರೋಜ್‌ಗಾ‌ರ್ ಮತ್ತು ಅಜೀವಿಕಾ ಮಿಷನ್‌(ಗ್ರಾಮೀಣ) (ವಿಬಿ-ಗ್ರಾಮ್-ಜಿ) ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತದೆ ಎಂದು ಹೇಳಿದ್ದರು.ಇಂದು ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು. ಆದರೆ ಪ್ರತಿಪಕ್ಷ ಸದಸ್ಯರ ಅನುಪಸ್ಥಿತಿಯಲ್ಲೇ ವಿಬಿ-ಜಿ ರಾಮ್ ಜಿ ವಿರುದ್ಧದ ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ಸ್ಪೀಕರ್ ಯುಟಿ ಖಾದ‌ರ್ ಅವರು ಹೇಳಿದರು. ಅಲ್ಲದೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!