ಹೆಜಮಾಡಿಯಲ್ಲಿ ಹುಚ್ಚಾಟ ಮೆರೆದಿದ್ದ ಕೇರಳ ವಿದ್ಯಾರ್ಥಿಗಳ ಬಸ್ ಕೂಡ್ಲಿಗಿಯಲ್ಲಿ ಪಲ್ಟಿ, ಹಲವರಿಗೆ ಗಾಯ

Picture of Savistara

Savistara

Bureau Report

ವಿಜಯನಗರ,ಫೆಬ್ರವರಿ 04: : ಬಸ್ ನಲ್ಲಿ ಪ್ರವಾಸಕ್ಕೆಂದು ಬಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಟೋಲ್ ನಲ್ಲಿ ಹುಚ್ಚಾಟವನ್ನು ಮೆರೆದಿದ್ದ ಕೇರಳ ಮೂಲದ ವಿದ್ಯಾರ್ಥಿಗಳ ಬಸ್ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಎಂಬಲ್ಲಿ ಫೆಬ್ರವರಿ 4 ರಂದು ಪಲ್ಟಿಯಾಗಿದೆ.

ಹಂಪಿಗೆ ತೆರಳುತ್ತಿದ್ದ ವೇಳೆ ಕೂಡ್ಲಿಗಿ ತಾಲೂಕಿನ ಅಮ್ಮನ ಕೇರಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಶಿಕ್ಷಕಿ ಸೇರಿದಂತೆ ಹಲವರಿಗೆ ಗಾಯಾಗಳಾಗಿದ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.

ಏನಿದು ಘಟನೆ..?

ಮಂಗಳವಾರ ರಾತ್ರಿ ಎರಡು ಪ್ರವಾಸಿ ಬಸ್ ಗಳಲ್ಲಿ ಆಗಮಿಸಿದ್ದ ಕೇರಳ ಮೂಲದ ವಿದ್ಯಾರ್ಥಿಗಳು ಟೋಲ್ ಬಳಿ ರಸ್ತೆಯಲ್ಲಿ ಬಸ್ ನಿಲ್ಲಿಸಿ ಮದ್ಯದ ನಶೆಯಲ್ಲಿ ಪಟಾಕಿ ಸಿಡಿಸಿ ಹುಚ್ಚಾಟವನ್ನು ಮೆರೆದಿದ್ದರು. ಇದರಿಂದ ಇತರ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಮಾತ್ರವಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿ ಸಾಕಷ್ಟು ಆಕ್ರೋಶ ಕೂಡ ಕೇಳಿ ಬಂದಿತ್ತು. ಈ ಬಸ್ KA-20-AC-9541 ಮೇಲೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಕಲಂ:285 BNS ರಂತೆ ಪ್ರಕರಣ ದಾಖಲಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!