ಪಶ್ಚಿಮ ಬಂಗಾಳದ 294 ಕ್ಷೇತ್ರಗಳಲ್ಲೂ ಏಕಾಂಗಿ ಸ್ಪರ್ಧೆ: ಕಾ0ಗ್ರೆಸ್ ಘೋಷಣೆ

Picture of Savistara

Savistara

Bureau Report

ಕೋಲ್ಕತ್ತ: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಮತ್ತು ರಾಜ್ಯದ ಎಲ್ಲಾ 294 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಗುರುವಾರ ಘೋಷಿಸಿತು.

ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿಯ(ಡಬ್ಲ್ಯುಬಿಪಿಸಿಸಿ) ಹಿರಿಯ ನಾಯಕರೊಂದಿಗೆ ಪಕ್ಷದ ಉನ್ನತ ನಾಯಕರ ಪ್ರಮುಖ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನವದೆಹಲಿಯ ರಾಜಾಜಿ ಮಾರ್ಗ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್‌, ರಾಜ್ಯ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್, ರಾಜ್ಯ ಘಟಕದ ಮುಖ್ಯಸ್ಥ ಶುಭಂಕರ್ ಸರ್ಕಾರ್, ಹಿರಿಯ ನಾಯಕ ಅಧೀರ್ ರಂಜನ್‌ ಚೌಧರಿ ಮತ್ತು ಸಂಸದ ಇಶಾ ಖಾನ್ ಚೌಧರಿ ಇತರರು ಭಾಗವಹಿಸಿದ್ದರು. ಕೆಲವು ನಾಯಕರು ವರ್ಚುವಲ್ ಆಗಿ ಸಭೆಯಲ್ಲಿ ಭಾಗವಹಿಸಿದ್ದರು.ವರದಿಗಾರರ ಜೊತೆ ಮಾತನಾಡಿದ ಮಿರ್, ಬಹುಶಃ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ಚುನಾವಣೆ ಕುರಿತ ಪ್ರಮುಖ ಕಾರ್ಯತಂತ್ರದ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದ್ದಾರೆ.

‘ಎಲ್ಲರ ಜೊತೆಗಿನ ಚರ್ಚೆ ಬಳಿಕ ರಾಜ್ಯದ ಎಲ್ಲ 294 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಯಿತು’ ಎಂದು ತಿಳಿಸಿದ್ದಾರೆ.ಈ ಹಿಂದೆ ಮಾಡಿಕೊಂಡ ಚುನಾವಣಾಪೂರ್ವ ಮೈತ್ರಿಗಳು ತಳಮಟ್ಟದ ಕಾರ್ಯಕರ್ತರ ಕೈರ್ಯ ಕುಗ್ಗಿಸಿದ್ದವು ಎಂದಿದ್ದಾರೆ.2021ರ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಎಡಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿತ್ತು. ಆದರೆ, ಒಂದೇ ಒಂದು ಸ್ಥಾನ ಗೆದ್ದಿರಲಿಲ್ಲ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!