ತಮಿಳುನಾಡಿನಲ್ಲಿ ಹಕ್ಕಿ ಜ್ವರ ಆತಂಕ

Picture of Savistara

Savistara

Bureau Report

ಚೆನ್ನೈ: ತಮಿಳುನಾಡಿನ ವಿವಿಧೆಡೆ ಭಾರಿ ಪ್ರಮಾಣದ ಕಾಗೆಗಳು ಸತ್ತಿರುವುದರಿಂದ ಹಕ್ಕಿ ಜ್ವರ ಸ್ಫೋಟಗೊಳ್ಳುವ ಭೀತಿ ಎದುರಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಶುಕ್ರವಾರ ಹೈ ಅಲರ್ಟ್ ಘೋಷಿಸಿದೆ. ಜೈವಿಕ ಭದ್ರತೆಗೆ ಬೆದರಿಕೆ ಹೆಚ್ಚುತ್ತಿರುವುದರಿಂದ ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಪಶು ಕೋಳಿ ಇಲಾಖೆಯ ಅಧಿಕಾರಿಗಳು ರಾಜ್ಯದಾದ್ಯಂತದ ಸಾಕಾಣಿಕೆ ರೈತರು ಮತ್ತು ಕಾಡು ಹಕ್ಕಿಗಳ ನಿರ್ವಾಹಕರಿಗೆ ಸಲಹೆ ಮಾಡಿದೆ.

ಸಾರ್ವಜನಿಕರು ಕೂಡ ಕಟ್ಟುನಿಟ್ಟಿನ ಸುರಕ್ಷತಾ ಶಿಷ್ಟಾಚಾರಗಳನ್ನು ಪಾಲಿಸ ಬೇಕೆಂದು ಮಾರ್ಗಸೂಚಿ ಪ್ರತ್ಯೇಕ ಹೊರಡಿಸ ಲಾಗಿದೆ ಎಂದು ಸಾರ್ವಜನಿಕ ಆರೋಗ್ಯ ಮತ್ತು ಪ್ರತಿಬಂಧಕ ಔಷಧಿ ನಿರ್ದೇಶನಾಲಯದ ನಿರ್ದೇಶಕ ಡಾ. ಎ. ಸೋಮ ಸುಂದರಂ ತಿಳಿಸಿದ್ದಾರೆ. ತಮಿಳುನಾಡಿನಲ್ಲಿ ಹಕ್ಕಿ ಜ್ವರ ಇರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿರುವ ಸುತ್ತೋಲೆ ಆಧಾರದಲ್ಲಿ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ ಎಂದಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!