“ಧೀಮಂತ ನೇತಾರ, ಧಾರ್ಮಿಕ ಮುಖಂಡ ಹಾಗೂ ಜನನಾಯಕನನ್ನು ಕರಾವಳಿ ಕಳೆದುಕೊಂಡಿದೆ” -ಅಪ್ಪಣ್ಣ ಹೆಗ್ಡೆ ನಿಧನಕ್ಕೆ ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಸಂತಾಪ

Picture of Savistara

Savistara

Bureau Report

”ಕರಾವಳಿ ಪ್ರದೇಶದ ಹಿರಿಯ ರಾಜಕಾರಣಿ, ಧಾರ್ಮಿಕ ನಾಯಕ, ಶಿಕ್ಷಣ ತಜ್ಞ ಹಾಗೂ ಕಂಬಳ ಸಂಪ್ರದಾಯದ ಮಹತ್ವದ ಸಂಘಟಕರಾಗಿದ್ದ ಅಪ್ಪಣ್ಣ ಹೆಗ್ಡೆ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು.ರಾಜಕೀಯ ಕ್ಷೇತ್ರದಲ್ಲಿ ಅವರ ಸೇವೆ, ಸಮಾಜದ ಏಕತೆಗೆ ನೀಡಿದ ಕೊಡುಗೆ ಹಾಗೂ ಕರಾವಳಿಯ ಸಾಂಸ್ಕೃತಿಕ ಪರಂಪರೆಯಾದ ಕಂಬಳವನ್ನು ಉತ್ತೇಜಿಸಿದ ಅವರ ಪ್ರಯತ್ನಗಳು ಸದಾಕಾಲ ಸ್ಮರಣೀಯವಾಗಿರುತ್ತವೆ. ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅವರು ನೀಡಿದ ಮಾರ್ಗದರ್ಶನ ಅನೇಕ ಜನರಿಗೆ ಪ್ರೇರಣೆಯಾಗಿದೆ.ಈ ದುಃಖದ ಘಳಿಗೆಯಲ್ಲಿ ಭಗವಂತನು ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತಾ, ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಅಗಲಿದ ನಾಯಕನ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಈ ಮೂಲಕ ಶ್ರದ್ಧಾಂಜಲಿ ಅರ್ಪಿಸುತ್ತೇನೆ.” ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಸಂತಾಪ ಸೂಚಿಸಿದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!