ಬೆಂಗಳೂರು-ಮಂಗಳೂರು ವಂದೇ ಭಾರತ್ ಶೀಘ್ರವೇ ಸಂಚಾರ: ಸಚಿವ ಅಶ್ವಿನಿ ವೈಷ್ಣವ್

Picture of Savistara

Savistara

Bureau Report

ಬೆಂಗಳೂರು, ಫೆ. 7: ಶೀಘ್ರವೇ ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲು ಸೇವೆ – ಪ್ರಾರಂಭಿಸುವ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಕೇಂದ್ರ ರೈಲ್ವೇ, ಐಟಿಬಿಟಿ ಹಾಗೂ ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.ಹಾಸನ-ಮಂಗಳೂರು ನಡುವಿನ ಘಾಟಿ ವಿಭಾಗದಲ್ಲಿ ವಿದ್ಯುದೀಕರಣ ಕಾರ್ಯ ಭರ ದಿಂದ ಸಾಗುತ್ತಿದ್ದು ಮುಕ್ತಾಯಗೊಂಡು ಸುರಕ್ಷಾ ಪ್ರಮಾಣ ಪತ್ರ ಸಿಗಲು ಕಾಯುತ್ತಿದ್ದೇವೆ. ಪ್ರತೀ ದಿನ 2 ವಂದೇ ಭಾರತ್ ರೈಲು ಈ ಮಾರ್ಗದಲ್ಲಿ ಓಡಾಡ ಲಿದೆ ಎಂದು ವಿವರಿಸಿದರು.ಬೆಂಗಳೂರು-ಮಂಗಳೂರು ವಂದೇ ಭಾರತ್ ಸಂಪರ್ಕವನ್ನು ಕಾರವಾರದ ವರೆಗೂ ವಿಸ್ತರಿಸುವ ಉದ್ದೇಶವನ್ನು ಕೇಂದ್ರ ಸರಕಾರ ಹೊಂದಿದೆ ಎಂದು ಇದೇ ವೇಳೆ ವಿವರಿಸಿದರು.52,950 ಕೋ.ರೂ. ಹೂಡಿಕೆರಾಜ್ಯದ ರೈಲ್ವೆ ಯೋಜನೆಗಳಿಗಾಗಿ ಕೇಂದ್ರ ಸರಕಾರ ಒಟ್ಟು 52,950 ಕೋಟಿ ರೂ. ಹೂಡಿಕೆ ಮಾಡುತ್ತಿದ್ದು ಕರ್ನಾಟಕಕ್ಕೆ ಈ ವರ್ಷದ ಬಜೆಟ್‌ನಲ್ಲಿ 7,749 ಕೋಟಿ ರೂ. ಕೊಡುಗೆ ನೀಡ ಲಾಗಿದೆ. ಇದು ಯುಪಿಎ ಅವಧಿಯಲ್ಲಿ ದೊರೆತ ಅನುದಾನಕ್ಕಿಂತ 9 ಪಟ್ಟು ಹೆಚ್ಚು ಎಂದರು.ಬೆಂಗಳೂರು-ಮುಂಬಯಿ ಮಧ್ಯೆ ಶೀಘ್ರದಲ್ಲಿ ಪ್ರೀಮಿಯಂ ರೈಲು ಸೇವೆ ಆರಂಭಿಸುವುದಾ ಗಿಯೂ ಕೂಡ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!