ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆ ತಾತ್ಕಾಲಿಕ ಸ್ಥಗಿತ: ಬಿಎಂಆರ್‌ಸಿಎಲ್‌ ಮಾಹಿತಿ

Picture of Savistara

Savistara

Bureau Report

ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ಸೋಮವಾರದಿಂದ(ಫೆ.9) ಶೇ 5ರಷ್ಟು ಹೆಚ್ಚಳ ಮಾಡುವ ಪ್ರಸ್ತಾವ ಸದ್ಯಕ್ಕೆ ಸ್ಥಗಿತಗೊಂಡಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ದರ ಏರಿಕೆ ಮಾಡದಂತೆ ಕೇಂದ್ರ ನಗರ ವ್ಯವಹಾರಗಳ ಸಚಿವ ಮನೋಹರ ಲಾಲ್ ಖಟ್ಟರ್ ಅವರು ನೀಡಿದ ಸೂಚನೆ ಭಾನುವಾರ ರಾತ್ರಿ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಜೆ. ರವಿಶಂಕರ್ ಅವರಿಗೆ ತಲುಪಿದೆ. ಆನಂತರ, ಪ್ರಯಾಣ ದರ ಏರಿಕೆಯ ನಿರ್ಧಾರವನ್ನು ಮುಂದೂಡುವುದಾಗಿ ಅಧಿಕಾರಿಗಳು ಪ್ರಕಟಿಸಿದ್ದಾರೆ.ಫೆಬ್ರುವರಿ 9ರಿಂದ ವಾರ್ಷಿಕ ಸ್ವಯಂಚಾಲಿತ ದರ ಜಾರಿಗೆ ಬರಲಿದೆ ಎಂದು ಈ ಹಿಂದೆ ಪ್ರಕಟಣೆ ನೀಡಲಾಗಿತ್ತು. ಈ ನಿರ್ಧಾರವನ್ನು ಮುಂದಿನ ಆದೇಶ ಬರುವವರೆಗೆ ಹಿಂತೆಗೆದುಕೊಳ್ಳಲಾಗಿದೆ. ಪರಿಷ್ಕೃತ ದರ ಕುರಿತು ಅಂತಿಮ ನಿರ್ಧಾರವನ್ನು ನಿರ್ದೇಶಕರ ಮಂಡಳಿಯ ಪರಿಶೀಲನೆಯ ನಂತರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!