ಕೇಂದ್ರ ಸರಕಾರವು ಮಹಾತ್ಮಾಗಾಂಧಿ ಉದ್ಯೋಗಖಾತ್ರಿ ಯೋಜನೆಯ ಹೆಸರನ್ನು ಮತ್ತು ನಿಯಮಗಳನ್ನು ಬದಲಾವಣೆ ಮಾಡಿರುವುದನ್ನು ಪ್ರತಿಭಟಿಸಿ ದ.ಕ.ಜಿಲ್ಲಾ ಕಾಂಗ್ರೆಸ್‌ನ ನೇತೃತ್ವದಲ್ಲಿ ೪ ದಿನಗಳ ನರೇಗಾ ಬಚಾವೋ ಸಂಗ್ರಾಮ್ ಪಾದಯಾತ್ರೆ ಆಯೋಜಿಸಿದ್ದು, ಇಂದು ಸುಳ್ಯದಿಂದ ಆರಂಭಗೊಂಡಿತು.

ಫೆ. ೧೨ ರಂದು ಮುಲ್ಕಿಯಲ್ಲಿ ಸಮಾಪನಗೊಳ್ಳಲಿರುವ ಈ ಪಾದಯಾತ್ರೆಗೆ ಸುಳ್ಯದ ಗಾಂಧಿನಗರದಲ್ಲಿರುವ ಗಾಂಧಿ ಪ್ರತಿಮೆಯ ಬಳಿ ಮಾಜಿ ಸಚಿವ ಹಾಗೂ ಮಾಜಿಸ ಸಂಸದ ಜಯಪ್ರಕಾಶ್ ಹೆಗ್ಡೆ ಚಾಲನೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್‌ಕುಮಾರ್ ಪಾದಯಾತ್ರೆಯ ಉದ್ದೇಶವನ್ನು ವಿವರಿಸಿದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಸ್ವಾಗತಿಸಿದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್, ಮಾಜಿ ಶಾಸಕ ಜೆ.ಆರ್.ಲೋಬೋ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಪರಾಜಿತ ಶಾಸಕ ಅಭ್ಯರ್ಥಿ ಜಿ.ಕೃಷ್ಣಪ್ಪ, ಶಾಲಿಟ್ ಪಿಂಟೋ, ಶುಭಾಸ್ ಕೊಲ್ನಾಡು, ಸದಾನಂದ ಮಾವಜಿ, ರಾಧಾಕೃಷ್ಣ ಬೊಳ್ಳೂರು, ಶಾಹುಲ್ ಹಮೀದ್ ಕುತ್ತಮೊಟ್ಟೆ, ಕೆ.ಎಂ.ಮುಸ್ತಫಾ ಮೊದಲಾದ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುಳ್ಯ ಬ್ಲಾಕ್ ಮತ್ತು ಕಡಬ ಬ್ಲಾಕ್‌ಗಳಿಂದ ಆಗಮಿಸಿದ ನಾಯಕರು ಮತ್ತು ಕಾರ್ಯಕರ್ತರು ಅಲ್ಲದೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಸುಮಾರು ೩೦೦ರಷ್ಟು ಕಾರ್ಯಕರ್ತರು ಮತ್ತು ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.












































