ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರಕ್ಕೆ ಬ್ರೇಕ್‌ ಹಾಕಿದ ಬಿ ಎಂ ಆರ್ ಸಿ ಎಲ್

Picture of Savistara

Savistara

Bureau Report

ಬೆಂಗಳೂರು: ರಾಜಧಾನಿಯ ಮೆಟ್ರೋ ಪ್ರಯಾಣಿಕರಿಗೆ ನಿರಂತರವಾಗಿ ಕಾಡುತ್ತಿದ್ದ ದರ ಏರಿಕೆಯ ಭೀತಿ ಸದ್ಯಕ್ಕೆ ದೂರವಾಗಿದೆ. ಫೆಬ್ರವರಿ 9ರಿಂದ ಜಾರಿಗೆ ಬರಬೇಕಿದ್ದ ಮೆಟ್ರೋ ಟಿಕೆಟ್‌ ದರ ಪರಿಷ್ಕರಣೆಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತಾತ್ಕಾಲಿಕವಾಗಿ ಮುಂದೂಡಿದೆ.

ಕಳೆದ ವಾರ ಬಿಎಂಆರ್‌ಸಿಎಲ್ ಪ್ರತಿ ಹಂತದ ದರದಲ್ಲಿ 1 ರಿಂದ 5 ರೂಪಾಯಿವರೆಗೆ ಏರಿಕೆ ಮಾಡುವುದಾಗಿ ಘೋಷಿಸಿತ್ತು. ಇದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿತ್ತು. ಬಿಜೆಪಿಯ ತೇಜಸ್ವಿ ಸೂರ್ಯ ಸೇರಿದಂತೆ ಹಲವು ನಾಯಕರು ಈ ನಿರ್ಧಾರವನ್ನು ಖಂಡಿಸಿ, ಕೇಂದ್ರ ಸಚಿವರ ಗಮನಕ್ಕೆ ತಂದಿದ್ದರು. ರಾಜ್ಯ ಸರ್ಕಾರವು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು.

ಬಿಎಂಆರ್‌ಸಿಎಲ್ ಹೇಳಿಕೆ:”ಫೆಬ್ರವರಿ 5 ರಂದು ಹೊರಡಿಸಲಾಗಿದ್ದ ದರ ಪರಿಷ್ಕರಣೆಯ ಮಾಧ್ಯಮ ಪ್ರಕಟಣೆಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ಮಂಡಳಿಯ (Board) ಮುಂದಿನ ಪರಿಶೀಲನೆಯ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು,” ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!