ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೈತನ ಅಸಹಾಯಕ ಕೂಗು ; ಬದುಕಿದ್ದಾಗಲೇ ತಿಥಿಗೆ ಆಹ್ವಾನ! ಬೆಳಗ್ಗೆ ಸಂತಾಪ, ಮಧ್ಯಾಹ್ನ ತಿಥಿ ಊಟ!

Picture of Savistara

Savistara

Bureau Report

ಸರ್ಕಾರ ಮತ್ತು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ರೈತರೊಬ್ಬರು ಬದುಕಿದ್ದಾಗಲೇ ತನ್ನ ತಿಥಿ ಹಾಗೂ ಶ್ರದ್ಧಾಂಜಲಿ ಸಭೆಗೆ ಅಧಿಕಾರಿಗಳಿಗೆ ಆಹ್ವಾನ ನೀಡಿರುವ ಅಪರೂಪದ ಮತ್ತು ಆಕ್ರೋಶಭರಿತ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ.

ಗಂಧದ ಬೆಳೆಗಾರ ವಿಶುಕುಮಾರ್ ಎಂಬವರು ಹಲವು ವರ್ಷಗಳಿಂದ ತಮ್ಮ ಜಮೀನನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ ಕಳೆದ ಕೆಲ ವರ್ಷಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ತಮ್ಮ ಜಮೀನು ಹಾಗೂ ಜಮೀನಿನಲ್ಲಿದ್ದ ಬೆಲೆಬಾಳುವ ಗಂಧದ ಮರಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಂಡಿದೆ. ಆದರೆ ಸರ್ಕಾರ ಇದಕ್ಕೆ ಸೂಕ್ತ ಪರಿಹಾರ ನೀಡದೆ ವಿಶುಕುಮಾರ್ ಅವರನ್ನು ಸತಾಯಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಬೇಸತ್ತ ವಿಶುಕುಮಾರ್ ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ.ವಿಶುಕುಮಾ‌ರ್ ವಿತರಿಸಿರುವ ಆಹ್ವಾನ ಪತ್ರಿಕೆಯಲ್ಲಿ, “ನಾಳೆ ಬೆಳಗ್ಗೆ 10 ಗಂಟೆಗೆ ನನ್ನ ಸಂತಾಪ ಸಭೆ ಹಾಗೂ ಮಧ್ಯಾಹ್ನ 1 ಗಂಟೆಗೆ ಊಟದ ವ್ಯವಸ್ಥೆ ಇದೆ. ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅಧಿಕಾರಿಗಳು, ಅರಣ್ಯ ಇಲಾಖೆಯ ಭ್ರಷ್ಟ ಅಧಿಕಾರಿಗಳು, ಪೊಲೀಸ್ ಇಲಾಖೆಯ ಒಳ್ಳೆಯ ಅಧಿಕಾರಿಗಳು ಹಾಗೂ ವಿಶೇಷ ಭೂಸ್ವಾಧೀನ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು” ಎಂದು ವ್ಯಂಗ್ಯಭರಿತವಾಗಿ ಬರೆಸಿದ್ದಾರೆ. ಈ ಆಹ್ವಾನವು ವ್ಯವಸ್ಥೆಯ ವಿರುದ್ಧ ಅವರ ಅಸಹಾಯಕತೆ ಆಕ್ರೋಶವನ್ನು ಸ್ಪಷ್ಟವಾಗಿ ತೋರಿಸುತ್ತದೆ.

ಅಧಿಕಾರಿಗಳ ಅವೈಜ್ಞಾನಿಕ ದರ ನಿಗದಿಯೇ ಈ ಪ್ರತಿಭಟನೆಯ ಮೂಲ ಹೇಳಿಕೆಯಂತೆ, ಜಮೀನು ಕಾರಣವಾಗಿದೆ. ರೈತನ ಸ್ವಾಧೀನದ ವೇಳೆ ಇತರ ಮರಗಳಿಗೆ ಲಕ್ಷಾಂತರ ರೂಪಾಯಿ ಪರಿಹಾರ ನಿಗದಿಪಡಿಸಲಾಗಿದೆ. ಒಂದು ಮಾವಿನ ಮರಕ್ಕೆ 63 ಸಾವಿರ ರೂ., ತೆಂಗಿನ ಮರಕ್ಕೆ 37 ಸಾವಿರ ರೂ., ನಿಂಬೆ ಗಿಡಕ್ಕೆ 3,400 ರೂ. ಹಾಗೂ ಬೇವಿನ ಮರಕ್ಕೆ 2,200 ರೂ. ನೀಡಲಾಗುತ್ತಿದೆ. ಆದರೆ ಅತ್ಯಂತ ಬೆಲೆಬಾಳುವ ಶ್ರೀಗಂಧದ ಮರಕ್ಕೆ ಕೇವಲ 420 ರೂ. ಮಾತ್ರ ನಿಗದಿಪಡಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ನ್ಯಾಯಾಲಯವು ಶ್ರೀಗಂಧದ ಮರಕ್ಕೆ ಕನಿಷ್ಠ 25 ಸಾವಿರ ರೂ. ವೈಜ್ಞಾನಿಕ ದರ ನಿಗದಿಪಡಿಸುವಂತೆ ಸೂಚಿಸಿದ್ದರೂ, ಅದನ್ನು ಕಡೆಗಣಿಸಿ ತೀರಾ ಕಡಿಮೆ ಮೊತ್ತ ನಿಗದಿಪಡಿಸಲಾಗಿದೆ ಎಂದು ವಿಶುಕುಮಾ‌ರ್ ಆರೋಪಿಸಿದ್ದಾರೆ.ಅಧಿಕಾರಿಗಳ ನಿರ್ಲಕ್ಷ್ಯದಿಂದ ರೋಸಿಹೋಗಿರುವ ಅವರು, ವಾರದ ಹಿಂದೆಯಷ್ಟೇ ರಾಷ್ಟ್ರಪತಿಗಳಿಗೆ ದಯಾಮರಣಕ್ಕೆ ಮನವಿ ಸಲ್ಲಿಸಿದ್ದಲ್ಲದೆ, ಶಿವಮೊಗ್ಗದ ಸಿಸಿಎಫ್ ಕಚೇರಿ ಬಳಿ ಕಾರಿನಲ್ಲೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು. ಆದರೂ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಇದೀಗ ಬದುಕಿದ್ದಾಗಲೇ ತನ್ನ ತಿಥಿಗೆ ಆಹ್ವಾನ ನೀಡುವ ಮೂಲಕ ವ್ಯವಸ್ಥೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!