ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಮುಂದಾದ ಕೇಂದ್ರ ಸರ್ಕಾರ; ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರ ಸತತ ಪ್ರಯತ್ನಕ್ಕೆ ಯಶಸ್ಸು

Picture of Savistara

Savistara

Bureau Report

ನವದೆಹಲಿ, 10 ಫೆಬ್ರವರಿ 2026: ಆಗುಂಬೆ ಘಾಟ್ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ–169ಎ ರಸ್ತೆಯನ್ನು (ಕಿ.ಮೀ. 30.75 ರಿಂದ 51.60ರವರೆಗೆ) ಎರಡು ಲೇನ್‌ ರಸ್ತೆ, ಎರಡೂ ಬದಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸುವ ಉದ್ದೇಶದಿಂದ ಕಾರ್ಯಸಾಧ್ಯತಾ ಅಧ್ಯಯನ, ವಿವರವಾದ ಯೋಜನಾ ವರದಿ (ಡಿಪಿಆರ್), ಸಮೀಕ್ಷೆ ಹಾಗೂ ಭೂ ಯೋಜನೆ ತಯಾರಿಕೆಗಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೆಂಡರ್ ಆಹ್ವಾನಿಸಿರುವುದನ್ನು ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಸ್ವಾಗತಿಸಿದ್ದಾರೆ. ಗಮನಾರ್ಹವೆಂದರೆ, ಡಿಪಿಆರ್ ವ್ಯಾಪ್ತಿಯು ನಿರ್ದಿಷ್ಟವಾಗಿ ಸುರಂಗ ವಿನ್ಯಾಸ ತಜ್ಞರು ಮತ್ತು ಹಿರಿಯ ಭೂ-ಭೌತಶಾಸ್ತ್ರಜ್ಞರ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿದ್ದು, ಆಗುಂಬೆ ಘಾಟ್ ರಸ್ತೆಯಲ್ಲಿ ಸುರಂಗ ಮಾರ್ಗ ನಿರ್ಮಾಣದ ಆಯ್ಕೆಯ ಕಾರ್ಯಸಾಧ್ಯತೆಯನ್ನು ಪರೀಕ್ಷಿಸಲು, ವಿವರವಾದ ಭೂ-ತಾಂತ್ರಿಕ ತನಿಖೆಗಳಿಗೆ ಮೀಸಲಾದ ಬಜೆಟ್ ನಿಬಂಧನೆಗಳೊಂದಿಗೆ, ಅವಕಾಶ ಕಲ್ಪಿಸಲಾಗಿದೆ. ದಶಕಗಳಿಂದಲೂ ಬಾಕಿ ಉಳಿದಿದ್ದ ಆಗುಂಬೆ ಘಾಟ್ ಮೇಲ್ದರ್ಜೆಗೇರಿಸುವ ಜನರ ಬೇಡಿಕೆಗೆ ಇದು ಸ್ಪಷ್ಟ, ನಿರ್ಣಾಯಕ ಮತ್ತು ಆಡಳಿತಾತ್ಮಕವಾಗಿ ಮೊದಲ ಹೆಜ್ಜೆಯಾಗಿದೆ ಎಂದು ರಾಘವೇಂದ್ರ ತಿಳಿಸಿದ್ದಾರೆ.ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಜೊತೆಗೆ ಅಪಾಯಕಾರಿ ಹಾಗೂ ಅಪಘಾತಗಳಿಗೆ ಹೆಸರಾದ ಆಗುಂಬೆ ಘಾಟ್ ರಸ್ತೆಯ ಸುರಕ್ಷತೆ ಹೆಚ್ಚಿಸುವುದು, ಪಶ್ಚಿಮ ಘಟ್ಟ ಪ್ರದೇಶದ ಪ್ರಕೃತಿ ಸಂವೇದನಾಶೀಲತೆಗೆ ಗೌರವ ನೀಡುತ್ತಲೇ ವೈಜ್ಞಾನಿಕವಾಗಿ ರಸ್ತೆ ಅಭಿವೃದ್ಧಿ ಕೈಗೊಳ್ಳುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ ಎಂದು ರಾಘವೇಂದ್ರ ಹೇಳಿದ್ದಾರೆ. “ಡಿಪಿಆರ್ ಪ್ರಕ್ರಿಯೆ ಆರಂಭವಾಗಿರುವುದೇ ಈ ಯೋಜನೆ ಕುರಿತು ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಇದನ್ನು ಬಗ್ಗೆ ಎಷ್ಟು ಗಂಭೀರವಾಗಿ ಪರಿಗಣಿಸಿದೆ ಮತ್ತು ಕಾಲಮಿತಿಯೊಳಗೆ ಮುಗಿಸುವ ಬದ್ಧತೆಯನ್ನು ಪ್ರದರ್ಶಿಸುತ್ತದೆ. ಈ ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಯಿಂದ ಮಲೆನಾಡು – ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಹೊಸ ದಿಕ್ಕು ಲಭ್ಯವಾಗಲಿದ್ದು, ಸ್ಥಳೀಯ ನಿವಾಸಿಗಳು, ರೈತರು, ಅಕ್ಕಪಕ್ಕದ ಜಿಲ್ಲೆಗಳು, ಪ್ರವಾಸೋದ್ಯಮ ಹಾಗೂ ತುರ್ತು ಸೇವೆಗಳಿಗೆ ಗಣನೀಯ ಲಾಭವಾಗಲಿದೆ” ಎಂದು ಸಂಸದರು ಹೇಳಿದರು.ಈ ಮಹತ್ವದ ನಿರ್ಧಾರಕ್ಕೆ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಸಂಸದ ಬಿ.ವೈ.ರಾಘವೇಂದ್ರ ಕೃತಜ್ಞತೆ ಸಲ್ಲಿಸಿದ್ದಾರೆ. ಮುಂದಿನ ಹಂತಗಳಲ್ಲಿ ಯೋಜನೆ ಸುಗಮವಾಗಿ ಸಾಗಲು ಕೇಂದ್ರದೊಂದಿಗೆ ನಿರಂತರ ಸಂಯೋಜನೆ ಮುಂದುವರಿಸುವುದಾಗಿ ಅವರು ಹೇಳಿದ್ದು, ಭೂಸ್ವಾಧೀನ ಮತ್ತು ಕಾನೂನು ಪ್ರಕ್ರಿಯೆಗಳಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಈ ಬಹುಕಾಲದ ಮಹತ್ವಪೂರ್ಣ ಯೋಜನೆ, ಯೋಜನಾ ಹಂತದಿಂದ ಕಾರ್ಯರೂಪಕ್ಕೆ ಶೀಘ್ರವಾಗಿ ಸಾಗಲಿ ಎಂಬುದು ಎಲ್ಲರ ಆಶಯವಾಗಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!