ತಾನ್ಯಾ ನಾಥನ್: ಕೇರಳದ ಮೊದಲ ಅಂಧ ನ್ಯಾಯಾಂಗ ಅಧಿಕಾರಿ

Picture of Savistara

Savistara

Bureau Report

ತಿರುವನಂತಪುರ: ಕೇರಳದ ಕಣ್ಣೂರಿನ 24 ವರ್ಷದ ತಾನ್ಯಾನಾಥನ್ ಸಿ. ಅವರು ಸಿವಿಲ್ ನ್ಯಾಯಾಧೀಶ (ಜೂನಿಯರ್ ಡಿವಿಷನ್) ಹುದ್ದೆಗಾಗಿ ನಡೆದ ನ್ಯಾಯಾಂಗ ಸೇವೆ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದ ಮೊದಲ ಅಂಧ ನ್ಯಾಯಾಂಗ ಅಧಿಕಾರಿ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ.

ತಾನ್ಯಾ ಅವರು ಒಂದು ವರ್ಷದಿಂದ ವಕೀಲಿಕೆ ಅಭ್ಯಾಸ ಮಾಡುತ್ತಿದ್ದಾರೆ. ಸ್ಟೀನ್ ರೀಡರ್ ಮತ್ತು ಡಿಕ್ಟೇಷನ್ ಆ್ಯಪ್‌ಗಳನ್ನು ಬಳಸಿಕೊಂಡು ಅವರು ಕಾರ್ಯನಿರ್ವಹಿಸುತ್ತಿದ್ದಾರೆ.ತಾನ್ಯಾ ಅವರು ಕಣ್ಣೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಅಲ್ಲಿನ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದಿದ್ದಾರೆ. ಹುಟ್ಟಿನಿಂದಲೇ ಅಂಧರಾಗಿರುವ ಅವರು, ಪ್ರೌಢಶಾಲೆಯಲ್ಲಿ ಕಲಿಯುತ್ತಿರುವಾಗಲೇ ಕಾನೂನು ಕ್ಷೇತ್ರದಲ್ಲಿ ಮುಂದುವರಿಯುವ ಕನಸು ಕಂಡಿದ್ದರು.ಈ ಬಗ್ಗೆ ಪ್ರತಿಕ್ರಿಯಿಸಿರುವ ತಾನ್ಯಾ ಅವರು, ‘ಕಾನೂನು ಸೇವೆಯು ವಿಭಿನ್ನ ವೃತ್ತಿ ಎಂದು ಪರಿಗಣಿಸುತ್ತೇನೆ. ಅಲ್ಲದೆ, ಪ್ರತಿಯೊಬ್ಬರ ಪಾಲಿಗೂ ಕಾನೂನು ಬಲಿಷ್ಠವಾದ ಅಸ್ತ್ರ. ಇದು ಈ ಕ್ಷೇತ್ರದಲ್ಲಿ ಮುಂದುವರಿಯಲು ಪ್ರೇರೇಪಿಸಿತು’ ಎಂದರು.

‘ಇ-ನ್ಯಾಯಾಲಯಗಳ ಅನುಷ್ಠಾನದೊಂದಿಗೆ ಕೋರ್ಟ್‌ಗಳ ಆಧುನೀಕರಣವು ಅಂಗವಿಕಲರಿಗೆ ನ್ಯಾಯಾಲಯಗಳಲ್ಲಿ ವೃತ್ತಿ ಮಾಡಲು ಅನುಮಾಡಿಕೊಡುತ್ತದೆ’ ಎಂದು ಹೇಳಿದರು.’ಕಿರಿಯ ವಕೀಲೆಯಾಗಿದ್ದರೂ ಸಾಕಷ್ಟು ಬೆಂಬಲ ದೊರೆತಿದೆ. ಅಂಧತೆಯ ಮಿತಿಯಿಂದ ಹೊರಬಂದು ನ್ಯಾಯದಾನ ಮಾಡುವ ವಿಶ್ವಾಸವಿದೆ’ ಎಂದು ಹೇಳಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!