ಅವಧಿಗೆ ಮೊದಲೇ ಬಾಧಿಸಲಿದೆ ಬೇಸಿಗೆ | ಕರಾವಳಿಯಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಏರಿಕೆ

Picture of Savistara

Savistara

Bureau Report

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಅವಧಿಗೆ ಮುನ್ನವೇ ಬೇಸಿಗೆಯ ಬೇಗೆ ಆರಂಭವಾಗಲಿದೆ ಎನ್ನುತ್ತಿದ್ದಾರೆ ಹವಾಮಾನ ತಜ್ಞರು.ಕನಿಷ್ಠ ತಾಪಮಾನ ವಾಡಿಕೆಯಷ್ಟೇ ಇದ್ದರೂ ಕರಾವಳಿ ಮತ್ತಿತರ ಕೆಲವು ಭಾಗಗಳಲ್ಲಿ ಈಗಾಗಲೇ ಗರಿಷ್ಠ ತಾಪಮಾನದಲ್ಲಿ ಸುಮಾರು 2-3 ಡಿಗ್ರಿಯಷ್ಟು ಏರಿಕೆಯಾಗಿದೆ. ವಾಡಿಕೆಯಂತೆ ಮಾರ್ಚ್ ಮೊದಲ ವಾರದಿಂದ ಬೇಸಿಗೆ ಆರಂಭವಾಗುತ್ತದೆ. ಆದರೆ, ಈ ಬಾರಿ ಫೆಬ್ರವರಿ ಮೂರನೇ ವಾರದಿಂದಲೇ ಬೇಸಿಗೆ ಆರಂಭವಾಗುವ ಸಾಧ್ಯತೆಯಿದೆ. ಈಗಾಗಲೇ ರಾಜ್ಯದ ಹಲವೆಡೆ 31ರಿಂದ 37 ಡಿಗ್ರಿಯವರೆಗೆ ತಾಪಮಾನ ದಾಖಲಾಗಿದೆ ಎನ್ನುತ್ತಾರೆ ಹವಾಮಾನ ತಜ್ಞರಾದ ಶ್ರೀನಿವಾಸ್ ರೆಡ್ಡಿ,ಫೆಬ್ರವರಿ ತಿಂಗಳಾಂತ್ಯದ ಹೊತ್ತಿಗೆ ಕರಾವಳಿ ಭಾಗದಲ್ಲಿ ಹೆಚ್ಚಾಗಿರುವ ಒಣ ಹವೆ, ಅಧಿಕ ಬಿಸಿಲು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಾದ್ಯಂತ ವಿಸ್ತರಣೆ ಆಗಲಿದೆ. ಶಾಖದ ಅಲೆ ವಾತಾವರಣ ನಿರ್ಮಾಣವಾಗಲಿದೆ. ವಾಡಿಕೆಯಷ್ಟು ಹಲವೆಡೆ ವಾಡಿಕೆಗಿಂತ ಹೆಚ್ಚಿನ ತಾಪಮಾನ ದಾಖಲಾಗಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.ಕರ್ನಾಟಕದಲ್ಲಿ ಚಳಿ ವಾತಾವರಣ ಮರೆಯಾಗಿ ಬಿಸಿಯ ‘ವಾತಾವರಣ ನಿರ್ಮಾಣವಾಗುತ್ತಿದೆ. ಹವಾಮಾನ ಇಲಾಖೆ ಪ್ರಕಾರ, ಉಷ್ಣ ವಲಯದ ಮಟ್ಟದಲ್ಲಿ ಈ ಪ್ರದೇಶದ ಮೇಲೆ ಹಗುರದಿಂದ ಮಧ್ಯಮ ಪೂರ್ವ/ಈಶಾನ್ಯ ಮಾರುತಗಳು ಮೇಲುಗೈ ಸಾಧಿಸುತ್ತಿವೆ. ಬೇಸಿಗೆ ಕಾಲವಾಗಿದ್ದರಿಂದ ನಿರಂತರವಾಗಿ ಶಾಖದ ಅಲೆಯ ಪ್ರಭಾವ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ತಿಳಿಸಿದೆ.ಕರಾವಳಿ ಭಾಗದಲ್ಲಿ ಅತೀ ಗರಿಷ್ಠ ತಾಪಮಾನ ದಾಖಲಾಗಿದೆ.

ಕಾರವಾರದಲ್ಲಿ 37.2 ಡಿಗ್ರಿ ಸೆಲ್ಸಿಯಸ್, ಹೊನ್ನಾವರ 34.4 ಡಿಗ್ರಿ ಸೆಲ್ಸಿಯಸ್, ಮಂಗಳೂರು ಏರ್‌ಪೋರ್ಟ್ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಕಲಬುರಗಿಯಲ್ಲಿ 34 ಡಿಗ್ರಿ ಸೆಲ್ಸಿಯಸ್, ಬಳ್ಳಾರಿ 33 ಡಿಗ್ರಿ ಸೆಲ್ಸಿಯಸ್, ಹಾವೇರಿ, ಗದಗ ಮತ್ತು ಕೊಪ್ಪಳ ತಲಾ 32 ಡಿಗ್ರಿ ಸೆಲ್ಸಿಯಸ್, ಹಾಸನ, ಮೈಸೂರು, ಹಿರಿಯೂರು, ವಿಜಯಪುರ, ಗಂಗಾವತಿ, ಬೆಳಗಾವಿ ಏರ್‌ಪೋರ್ಟ್, ರಾಯಚೂರು, ಕೋಲಾರದಲ್ಲಿ ತಲಾ 31 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!