KMF ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ: ಪೈಪೋಟಿಗಿಳಿದ ಸಿಎಂ, ಡಿಸಿಎಂ

Picture of Savistara

Savistara

Bureau Report

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರದಮೇಲಾಟಗಳ ನಡುವೆ ಹಾಲು ಮಹಾಮಂಡಳದ ಅಧ್ಯಕ್ಷ ಸ್ಥಾನದ ಚುನಾವಣೆ ಸಮೀಪಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲಿಗರ ನಡುವೆ ಪೈಪೋಟಿ ಜೋರಾಗಿದೆ.

ಮೂವರ ಪೈಪೋಟಿಹಾಲು ಮಹಾಮಂಡಳದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಮೂವರ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷ ಡಿ.ಕೆ.ಸುರೇಶ್, ಬಳ್ಳಾರಿ, ಕೊಪ್ಪಳ- ರಾಯಚೂರು ಒಕ್ಕೂಟದ ಅಧ್ಯಕ್ಷ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಅವರು ಪ್ರಮುಖ ಆಕಾಂಕ್ಷಿಗಳು.ಹಿಂದಿನ ಅವಧಿಯಲ್ಲಿ ನಿಮ್ಮ ಬೆಂಬಲಿಗರಿಗೆ ಅವಕಾಶ ಮಾಡಿಕೊಟ್ಟಿದ್ದರಿಂದ ಈ ಅವಧಿಗೆ ನಮ್ಮ ಕಡೆಯವರಿಗೆ ಅಧ್ಯಕ್ಷ ಸ್ಥಾನ ಬಿಟ್ಟು ಕೊಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಸೋತಿರುವ ಸಹೋದರ ಡಿ.ಕೆ.ಸುರೇಶ್ ಅವರಿಗೆ ಕೆಎಂಎಫ್ ಚುಕ್ಕಾಣಿ ಕೊಡಿಸುವ ಇರಾದೆ ಶಿವಕುಮಾ‌ರ್ ಅವರದ್ದಾಗಿದೆ.ಸಿದ್ದರಾಮಯ್ಯ ಅವರು ತಮ್ಮ ಆಪ್ತ ರಾಘವೇಂದ್ರ ಹಿಟ್ನಾಳ ಪರ ಗಟ್ಟಿಯಾಗಿ ನಿಂತಿದ್ದಾರೆ. ಸೋಮವಾರ ಹಿಟ್ನಾಳ ಅವರು ಮುಖ್ಯಮಂತ್ರಿ ಅವರನ್ನು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಹಿಂದಿನ ಅವಧಿಯಲ್ಲಿ ಅವಕಾಶ ತಪ್ಪಿದ್ದರಿಂದ ನನಗೂ ಒಂದು ಅವಕಾಶ ಮಾಡಿಕೊಡಿ ಎಂದು ನಂಜೇಗೌಡ ಅವರು ಬೇಡಿಕೆ ಇಟ್ಟಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!