ಮಾ.3 ರಂದು ಚಂದ್ರಗ್ರಹಣ| ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನ ಹಾಗೂ ಸೇವೆಗಳಲ್ಲಿ ಸಮಯ ಬದಲಾವಣೆ

Picture of Savistara

Savistara

Bureau Report

ಮಾ.3ರಂದು ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯ ಮಾಡಲಾಗಿದೆ.ಭಕ್ತರು ಸಹಕರಿಸಬೇಕಾಗಿ ಶ್ರೀ ದೇವಳದ ಆಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಸರ್ಪಸಂಸ್ಕಾರ ಪ್ರಾರಂಭ ಇಲ್ಲ

ಮಾ.2 ಸೋಮವಾರ ಮತ್ತು 3 ರ ಮಂಗಳವಾರ ಸರ್ಪಸಂಸ್ಕಾರ ಪೂಜೆ ಪ್ರಾರಂಭವಿರುವುದಿಲ್ಲ. ಮಾ.3ರಂದು ಯಾವುದೇ ಸೇವೆಗಳು ದೇವಳದಲ್ಲಿ ನಡೆಯುವುದಿಲ್ಲ. ಈ ದಿನ ಮಧ್ಯಾಹ್ನದ ಮಹಾಪೂಜೆ ಬೆಳಗ್ಗೆ 8 ಗಂಟೆಗೆ ನಡೆಯಲಿದೆ.ಬೆಳಗ್ಗೆ 9 ಗಂಟೆಯ ಬಳಿಕ ಶ್ರೀ ದೇವರ ದರುಶನಕ್ಕೆ ಅವಕಾಶ ಇರುವುದಿಲ್ಲ. ಬೆಳಗ್ಗಿನ ಉಪಹಾರ 9 ಗಂಟೆ ತನಕ ಮಾತ್ರ ನಡೆಯಲಿದೆ. ಮಧ್ಯಾಹ್ನ ಪ್ರಸಾದ ಬೋಜನ ವ್ಯವಸ್ಥೆ ಇರುವುದಿಲ್ಲ. ರಾತ್ರಿ ಗಂಟೆ 7ರ ನಂತರ ಶ್ರೀ ದೇವಳದಲ್ಲಿ ಬಾಗಿಲು ತೆರೆಯಲಾಗುವುದು. ಬಳಿಕ ಶ್ರೀ ದೇವರ ಮಹಾಪೂಜೆ ನಡೆಯಲಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!