ಭಾರತ ಮಾರಾಟಕ್ಕಿಲ್ಲ; ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡುವುದಾಗಿ ಕಿರಣ್ ರಿಜಿಜು ಎಚ್ಚರಿಕೆ

Picture of Savistara

Savistara

Bureau Report

ನವದೆಹಲಿ, ಫೆಬ್ರವರಿ 11: ಲೋಕಸಭಾ ಅಧಿವೇಶನದಲ್ಲಿ ಇಂದು (ಬುಧವಾರ) ಭಾಷಣದ ವೇಳೆ ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಮಾತಿನ ಚಕಮಕಿ ನಡೆಯಿತು.

ಅಮೆರಿಕದ ಒತ್ತಡಕ್ಕೆ ಮೋದಿ ಸರ್ಕಾರ ಶರಣಾಗಿದೆ. ಮೋದಿ ಸರ್ಕಾರ ಅಮೆರಿಕಕ್ಕೆ ಭಾರತ ಮಾತೆಯನ್ನು ಮಾರಾಟ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇದಕ್ಕೆ ಸರ್ಕಾರದ ಕಡೆಯಿಂದ ಮತ್ತು ಸ್ಪೀಕರ್ ಅವರಿಂದ ವಿರೋಧ ವ್ಯಕ್ತವಾಯಿತು. ಸದನದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ಸದನದಲ್ಲಿ ಗದ್ದಲ ಭುಗಿಲೆದ್ದಿತು.

ಈ ವೇಳೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಕಿರಣ್ ರಿಜಿಜು, “ನೀವು ಯಾವುದೇ ಪುರಾವೆಗಳಿಲ್ಲದೆ ಆರೋಪಗಳನ್ನು ಹೊರಿಸುತ್ತಿದ್ದೀರಿ. ಅದು ಸ್ವೀಕಾರಾರ್ಹವಲ್ಲ. ನಿಮ್ಮ ಆರೋಪಗಳಿಗೆ ಸಾಕ್ಷಿ ನೀಡಿ. ಭಾರತ ಮಾರಾಟಕ್ಕಿಲ್ಲ. ಕಾಂಗ್ರೆಸ್ ಪಕ್ಷವು ದೇಶವನ್ನು ದುರ್ಬಲಗೊಳಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಭಾರತದ ಅತ್ಯಂತ ಬಲಿಷ್ಠ ಪ್ರಧಾನಿ. ಭಾರತ ಪ್ರಗತಿ ಹೊಂದುತ್ತಿರುವುದರಿಂದ ಕಾಂಗ್ರೆಸ್ ದುಃಖಿತವಾಗಿದೆ” ಎಂದು ಹೇಳಿದರು.

ಇದೇ ವೇಳೆ ಸ್ಪೀಕರ್ ಕುರ್ಚಿಯಲ್ಲಿ ಕುಳಿತಿದ್ದ ಜಗದಾಂಬಿಕಾ ಪಾಲ್ ರಾಹುಲ್ ಗಾಂಧಿಯವರ ಆರೋಪಗಳನ್ನು ಲೋಕಸಭೆಯ ದಾಖಲೆಯಲ್ಲಿ ಸೇರಿಸಲಾಗುವುದಿಲ್ಲ ಎಂದು ತೀರ್ಪು ನೀಡಿದರು.ಅಧಿವೇಶನದ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವ ಕಿರಣ್ ರಿಜಿಜು, ರಾಹುಲ್ ಗಾಂಧಿ ವಿರುದ್ಧ ಸರ್ಕಾರ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಲಿದೆ. ಅವರು ಸದನವನ್ನು ದಾರಿ ತಪ್ಪಿಸಿದ್ದಾರೆ ಮತ್ತು ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!