ಸಂಸತ್ ಸದಸ್ಯತ್ವ ರದ್ದುಗೊಳಿಸಲು ನಿರ್ಣಯ ಮಂಡಿಸಿದ ಬಿಜೆಪಿ

Picture of Savistara

Savistara

Bureau Report

ನವದೆಹಲಿ: ಲೋಕಸಭೆಯ ಬಜೆಟ್ ಅಧಿವೇಶನದ ಕಲಾಪದಲ್ಲಿ ಭಾರತ- ಅಮೆರಿಕನಡುವಿನ ವ್ಯಾಪಾರ ಒಪ್ಪಂದ ಕುರಿತು ಆಡಳಿತ ಮತ್ತು ವಿಪಕ್ಷಗಳ ನಡುವೆ ವಾಕ್ಸಮರ ನಡೆದ ಬೆನ್ನಲ್ಲೇ ವಿಪಕ್ಷ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ವಜಾಗೊಳಿಸುವಂತೆ ಬಿಜೆಪಿ ಗುರುವಾರ (ಫೆ.12) ನಿರ್ಣಯ ಮಂಡಿಸಿದೆ.ಬಜೆಟ್ ಅಧಿವೇಶನದ ಕಲಾಪದಲ್ಲಿ ರಾಹುಲ್ ಗಾಂಧಿ, ಭಾರತ- ಅಮೆರಿಕ ವ್ಯಾಪಾರ ಒಪ್ಪಂದದಲ್ಲಿ ಪ್ರಧಾನಿ ಮೋದಿ ಅವರು ದೇಶವನ್ನೇ ಮಾರಿದ್ದು, ಅಮೆರಿಕದ ಒತ್ತಡಕ್ಕೆ ಸಂಪೂರ್ಣವಾಗಿ ಶರಣಾಗಿರುವುದಾಗಿ ವಾಗ್ದಾಳಿ ನಡೆಸಿದ್ದರು.

ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಆರೋಪಕ್ಕೆ ಬಿಜೆಪಿ ಕೂಡಾ ತಿರುಗೇಟು ನೀಡಿತ್ತು. ಇದೀಗ ಬಿಜೆಪಿ ರಾಹುಲ್ ಗಾಂಧಿಯ ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿ ನೋಟಿಸ್ ಅನ್ನು ಲೋಕಸಭೆ ಕಾರ್ಯದರ್ಶಿಗೆ ಸಲ್ಲಿಸಿದೆ. ಆದರೆ ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಿಲ್ಲ ಎಂದು ವರದಿ ತಿಳಿಸಿದೆ.ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದೇಶದ ಜನರ ದಿಕ್ಕು ತಪ್ಪಿಸುವ ಆರೋಪ ಹೊರಿಸಿದ್ದು, ಈ ನಿಟ್ಟಿನಲ್ಲಿ ರಾಹುಲ್ ವಿರುದ್ಧ ಗುರುವಾರ ಸದಸ್ಯತ್ವ ರದ್ದು ಕುರಿತು ಮನವಿ ಮಾಡುವುದಾಗಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಗುರುವಾರ ಕಲಾಪ ಆರಂಭಕ್ಕೂ ಮೊದಲು ತಿಳಿಸಿದ್ದರು.

ಸಾಕ್ಷ್ಯಾಧಾರ ರಹಿತವಾಗಿ ಆರೋಪ ಮಾಡುವ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವವನ್ನು ರದ್ದುಗೊಳಿಸಿ, ಶಾಶ್ವತವಾಗಿ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ವಿಧಿಸಬೇಕೆಂದು ದುಬೆ ಒತ್ತಾಯಿಸಿದ್ದರು.ಜನವರಿ 28ರಿಂದ ಲೋಕಸಭೆ ಬಜೆಟ್ ಅಧಿವೇಶನ ಆರಂಭಗೊಂಡಿದ್ದು, 65 ದಿನಗಳ ಕಾಲ ಕಲಾಪ ನಡೆಯಲಿದ್ದು, ಏಪ್ರಿಲ್ 2ರಂದು ಅಧಿವೇಶನ ಮುಕ್ತಾಯಗೊಳ್ಳಲಿದೆ ಎಂದು ವರದಿ ತಿಳಿಸಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!