ಕಾಂಗ್ರೆಸ್ ಪಕ್ಷದ ನರೇಗಾ ಉಳಿಸಿ ಪಾದಯಾತ್ರೆ ಗುಂಡಿಬಿದ್ದ ಗ್ರಾಮೀಣ ರಸ್ತೆಗಳಲ್ಲಿ ಮಾಡಲಿ:ಮಾಜಿ ಶಾಸಕ ಸಂಜೀವ ಮಠಂದೂರು ವ್ಯಂಗ್ಯ

Picture of Savistara

Savistara

Bureau Report

ಪುತ್ತೂರು: ಕಾಂಗ್ರೆಸ್ ಪಕ್ಷದವರು ನರೇಗಾ ಉಳಿಸಿ ಎನ್ನುವ ಪಾದಯಾತ್ರೆಯನ್ನು ಕೇಂದ್ರ ಸರಕಾರ ನಿರ್ಮಿಸಿದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾಡುವ ಬದಲು ಗುಂಡಿ ಬಿದ್ದ ಗ್ರಾಮೀಣ ಭಾಗದ ರಸ್ತೆಗಳಲ್ಲಿ ಮಾಡಿದರೆ ಉತ್ತಮ ಎಂದು ಮಾಜಿ ಶಾಸಕ, ಬಿಜೆಪಿ ಮುಖಂಡ ಸಂಜೀವ ಮಠಂದೂರು ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೇಂದ್ರ ಸರಕಾರ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹಲವು ಬದಲಾವಣೆಗಳನ್ನು ಮಾಡುವ ಮೂಲಕ ವಿಕಸಿತ ಭಾರತ್ ಉದ್ಯೋಗ ಮತ್ತು ಆ ಜೀವಿಕಾ ಮಿಷನ್ ಎನ್ನುವ ಹೆಸರಿನಲ್ಲಿ ಮನ್ ರೇಗಾ ಹೆಸರನ್ನು ಬದಲಾಯಿಸಿದೆ.

ಅಲ್ಲದೆ ಯೋಜನೆಯಲ್ಲಿ ಪಾರದರ್ಶಕತೆ ತರುವ ಉದ್ಧೇಶದಿಂದ ಬಯೋಮೆಟ್ರಿಕ್ ಹಾಜರಾತಿ ಸೇರಿದಂತೆ ಹಲವು ಪಾರದರ್ಶಕತೆಯನ್ನು ತಂದಿದೆ. ಆದರೆ ಕಾಂಗ್ರೇಸ್ ಪಕ್ಷ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾರಣ ಈ ಬದಲಾವಣೆ ಕಾಂಗ್ರೆಸ್ ನವರಿಗೆ ತೊಂದರೆಯಾಗಿದೆ. ಈ ಕಾರಣಕ್ಕೆ ಯೋಜನೆಯ ಹೆಸರು ಬದಲಾಯಿಸಿದ್ದಾರೆ ಎಂದು ಆರೋಪಿಸಿ ಪಾದಯಾತ್ರೆಯ ಬೀದಿ ರಂಪಾಟ ಮಾಡುತ್ತಿದೆ ಎಂದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!