ಸಿಎಂ ಸಿದ್ದರಾಮಯ್ಯನವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆ :ಶಾಸಕ.ವಿ ಸುನಿಲ್ ಕುಮಾರ್ ಆಕ್ರೋಶ

Picture of Savistara

Savistara

Bureau Report

ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿರ್ದೇಶನ ನೀಡಿರುವುದು ರಾಜ್ಯದಲ್ಲಿ ಸಿಎಂ ನೇತೃತ್ವದ ಆಡಳಿತ ಹಳ್ಳಿ ತಪ್ಪಿದೆ ಎನ್ನುವುದಕ್ಕೆ ಕ್ಲಾಸಿಕ್ ಉದಾಹರಣೆಯಾಗಿದೆ ಎಂದು ಶಾಸಕ ವಿ ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಅಬಕಾರಿ ಹಾಗೂ ಆರೋಗ್ಯ ಇಲಾಖೆಯ ವೃಂದ ನಿಯಮಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಸಿದ್ದರಾಮಯ್ಯನವರೂ “ಇಂದ್ರೀಯ” ವಶವಾಗಿ ಆಡಳಿತದ ಹದ ಕಳೆದುಕೊಂಡಿದ್ದಾರೆ ಎಂಬುದಕ್ಕೆ ಇದು ನಿದರ್ಶನವಾಗಿದೆ.ಅಬಕಾರಿ ಇಲಾಖೆಯಲ್ಲಿ ನಡೆದಿರುವ 6000 ಕೋಟಿ ರೂ.ಗೂ ಅಧಿಕ ಮೊತ್ತದ ಅವ್ಯವಹಾರ ಹಾಗೂ ಕಿಕ್ ಬ್ಯಾಕ್ ದಂಧೆಯ ಹಿಂದೆ ಇಂಥ ಅವೈಜ್ಞಾನಿಕ ಹಾಗೂ ನಿಯಮ ಬಾಹಿರ ವರ್ಗಾವಣೆಯ ಸೂಚನೆಗಳು ಕೆಲಸ ಮಾಡಿರುವ ಸಾಧ್ಯತೆಗಳು ದಟ್ಟವಾಗಿದೆ. ಮುಖ್ಯಮಂತ್ರಿಗಳೇ ಆಯಕಟ್ಟಿನ ಇಲಾಖೆಗೆ ಮಾತ್ರ ನೀವು ಈ ರೀತಿ ಎರವಲು ಸೇವೆಯ ಶಿಫಾರಸು ಮಾಡುತ್ತೀರಾ ? ಅಥವಾ ನಿಮ್ಮಿಂದ ಮಾಡಿಸುತ್ತಾರಾ ? ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆಯಿಂದ ಸಾರ್ವಜನಿಕರು ನರಳುತ್ತಿರುವಾಗ ಜಿಲ್ಲಾ ವೈದ್ಯಾಧಿಕಾರಿಯೊಬ್ಬನನ್ನು ಅಬಕಾರಿ ಇಲಾಖೆಗೆ ನಿಯೋಜನೆ ಮಾಡುವಂತೆ ನೀವೇ ಖುದ್ದಾಗಿ ನಿರ್ದೇಶನ ನೀಡುತ್ತೀರೆಂದರೆ ಅದೆಂತ ಒತ್ತಡ ಹಾಗೂ ವ್ಯಾಮೋಹ ನಿಮ್ಮನ್ನು ಕಾಡುತ್ತಿರಬಹುದು ? ಅಥವಾ ಅಧಿಕಾರ ಹಸ್ತಾಂತರದ ಚಿಂತೆ ನಿಮ್ಮನ್ನು ಆವರಿಸಿದೆಯೋ ? ಎಂದು ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!