ಬಿಜೆಪಿ ಪುತ್ತೂರು ವತಿಯಿಂದ ರಾಮ್ ಜಿ ಕಾಯಿದೆ ಕುರಿತು ಜನಜಾಗೃತಿ

Picture of Savistara

Savistara

Bureau Report

ಭಾಜಪಾ ಪುತ್ತೂರು ವತಿಯಿಂದ ನಡೆದ ರಾಮ್ ಜಿ ಕಾಯ್ದೆಯ ಕುರಿತು ಜನಜಾಗೃತಿ ಮೂಡಿಸಲು ನಡೆದ ಪಾದಯಾತ್ರೆ,ಸಭಾ ಕಾರ್ಯಕ್ರಮ ಇಂದು ಉಪ್ಪಿನಂಗಡಿಯಲ್ಲಿ ಹಮ್ಮಿಕೊಳ್ಳಲಾಯಿತು.ಹಿಂದಿನ ಕೈ ನರೇಗಾ ಯೋಜನೆಯ ನ್ಯೂನತೆಗಳನ್ನು ಸರಿಪಡಿಸಿ, ಮೋದಿಜಿ ಅವರ ಕಲ್ಪನೆಯ ‘ವಿಬಿ-ಜಿ ರಾಮ್ ಜಿ’ ಕಾಯ್ದೆಯು ಗ್ರಾಮೀಣ ಭಾಗದ ಆರ್ಥಿಕತೆಗೆ ಹೊಸ ಶಕ್ತಿ ತುಂಬಲಿದೆ. ವರ್ಷಕ್ಕೆ 100 ದಿನಗಳ ಬದಲು 125 ದಿನಗಳ ಉದ್ಯೋಗ ಖಾತ್ರಿ ನೀಡುವುದು ಮತ್ತು ಕೃಷಿ ಹಂಗಾಮಿನಲ್ಲಿ ರೈತರಿಗೆ ಕಾರ್ಮಿಕರು ಸಿಗುವಂತೆ ವ್ಯವಸ್ಥೆ ಮಾಡಿರುವುದು ನಿಜಕ್ಕೂ ರೈತಪರ ಕಾಳಜಿಯಾಗಿದ್ದು ಭ್ರಷ್ಟಾಚಾರವನ್ನು ತೊಡೆದುಹಾಕಿ, ಹಳ್ಳಿಗಳಲ್ಲಿ ಶಾಶ್ವತ ಅಭಿವೃದ್ಧಿ ತರುವ ಈ ಕಾಯ್ದೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆಯೆಂದು ಬಿಜೆಪಿ ನಾಯಕರು ಈ ವೇಳೆ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ವಿಧಾನ ಪರಿಷತ್ತು ವಿಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ,ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್,ಮಾಜಿ ಪುತ್ತೂರು ಶಾಸಕರಾದ ಸಂಜೀವ ಮಟಂದೂರು, ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ದಯಾನಂದ್ ಉಜಿರೇಮಾರ್ ಸೇರಿದಂತೆ ರಾಜ್ಯ, ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು, ಮುಖಂಡರುಗಳು, ಪ್ರಮುಖರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!