ಬಿಜೆಪಿ ಮುಖಂಡರ ವಿರುದ್ಧ ಅಶ್ಲೀಲ ಹೇಳಿಕೆ: ಡಿಎಂಕೆಯ ಕೃಷ್ಣಮೂರ್ತಿಗೆ 3 ವರ್ಷ ಜೈಲು

Picture of Savistara

Savistara

Bureau Report

ಚೆನ್ನೈ: ರಾಜ್ಯಪಾಲ ಆ‌ರ್.ಎನ್. ರವಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಸಾರ್ವಜನಿಕ ಸಭೆಯಲ್ಲಿ ಅಶ್ಲೀಲ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆ ಪಕ್ಷದ ನಾಯಕ ಶಿವಾಜಿ ಕೃಷ್ಣಮೂರ್ತಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ರಾಜ್ಯಪಾಲ ಆರ್.ಎನ್. ರವಿ, ಬಿಜೆಪಿ ನಾಯಕಿ ಖುಷ್ಟು ಸುಂದರ್, ಅಣ್ಣಾಮಲೈ ಹಾಗೂ ಎಐಎಡಿಎಂಕೆ ಮುಖಂಡ ಪಳನಿಸ್ವಾಮಿ ವಿರುದ್ಧ ಶಿವಾಜಿ ಕೃಷ್ಣಮೂರ್ತಿ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಸಂಬಂಧ ರಾಜ್ಯಪಾಲರು, ಬಿಜೆಪಿ ನಾಯಕರು ಸೇರಿ ಮೂರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಎಗೋರ್ ನ್ಯಾಯಾಲಯ ಮೂರು ಪ್ರಕರಣಗಳಲ್ಲಿ ಶಿವಾಜಿ ಕೃಷ್ಣಮೂರ್ತಿಗೆ ₹20,000 ದಂಡ ಹಾಗೂ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈಗಾಗಲೇ ಅನುಭವಿಸಿರುವ ನ್ಯಾಯಾಂಗ ಬಂಧನಾವಧಿಯನ್ನು ಶಿಕ್ಷೆಯಲ್ಲಿ ಕಡಿತಗೊಳಿಸಲಾಗುತ್ತದೆ.ಶಿವಾಜಿ ಕೃಷ್ಣಮೂರ್ತಿ ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಡಿಎಂಕೆ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು.

ಖುಷ್ಟು ತೀರ್ಪನ್ನು ಸ್ವಾಗತಿಸಿದ್ದು, ಇದು ನನಗೆ ಸಂಬಂಧಿಸಿದ ಜಯವಲ್ಲ, ಇಂತಹ ಅವಹೇಳನ ಎದುರಿಸುತ್ತಿರುವ ಪ್ರತಿಯೊಬ್ಬ ಮಹಿಳೆಯ ಜಯವಾಗಿದೆ. ಇಂತಹವರ ವಿರುದ್ಧ ಒಟ್ಟಾಗಿ ಹೋರಾಡೋಣ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!