ಉಡುಪಿ: ಗೂಗಲ್‌ ಮ್ಯಾಪ್ ಯಡವಟ್ಟು: ಹೊಳೆ ಬಳಿ ಕಾರು ಡಿಕ್ಕಿ: ಅಪಾಯದಿಂದ ಪಾರಾದ ಕೇರಳದ ಕುಟುಂಬ.!

Picture of Savistara

Savistara

Bureau Report

ಉಡುಪಿ: ಗೂಗಲ್ ಮ್ಯಾಪ್ ಸೂಚನೆಯ ಯಡವಟ್ಟಿನಿಂದ ಕಾರೊಂದು ಆವೆ ಮಣ್ಣಿನ ಹೊಂಡಕ್ಕಿ ಹೊಳೆಗೆ ಬೀಳುವ ಸ್ಥಿತಿಗೆ ತಲುಪಿದ ಘಟನೆ ಶುಕ್ರವಾರ ರಾತ್ರಿ ಕೋಟ ಸಾಹೇಬ್ರಕಟ್ಟೆ ಮುಖ್ಯ ರಸ್ತೆಯ ಉಪ್ಲಾಡಿಯಲ್ಲಿ ಬದಿಯಲ್ಲಿ ಸಂಭವಿಸಿದೆ.ಕೇರಳ ಮೂಲದ ಕುಟುಂಬವೊಂದು ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕಾಗಿ ಪ್ರಯಾಣಿಸುತ್ತಿದ್ದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೇರವಾಗಿ ಸಂಚರಿಸುವ ಬದಲಿಗೆ ಗೂಗಲ್ ಮ್ಯಾಪ್‌ನಲ್ಲಿ ತೋರಿದ ಡೈವರ್ಶನ್ ಅನುಸರಿಸಿ ಬ್ರಹ್ಮಾವರ ಬಾರ್ಕೂರು ಮಾರ್ಗವಾಗಿ ಸಾಹೇಬ್ರಕಟ್ಟೆ ಮೂಲಕ ಕೋಟದತ್ತ ಸಾಗಿತ್ತು.ಉಪ್ಲಾಡಿ ಹೊಳೆ ಸಮೀಪ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ನಂತರ ಹೊಳೆ ಬದಿಯ ಸಿಮೆಂಟ್ ಪಿಲ್ಲರ್ ಮೇಲೆ ಹತ್ತಿ ನಿಂತಿದೆ. ಆವೆ ಮಣ್ಣಿನ ಹೊಂಡಕ್ಕೆ ಕೇವಲ ಒಂದು ಅಡಿ ಅಂತರದಲ್ಲಿ ಕಾರು ನಿಂತಿದ್ದರಿಂದ ಭಾರೀ ದುರಂತ ತಪ್ಪಿದಂತಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!