ಕ್ರಿಮಿನಲ್‌ ಕಾನೂನು ಸಂಪೂರ್ಣ ಜಾರಿಯಾದರೆ ಶಿಕ್ಷೆ ಪ್ರಮಾಣ ಹೆಚ್ಚುತ್ತದೆ: ಅಮಿತ್ ಶಾ

Picture of Savistara

Savistara

Bureau Report

ನವದೆಹಲಿ: ಮುಂದಿನ ದಿನಗಳಲ್ಲಿ ದೇಶದಲ್ಲಿ ಮೂರು ಹೊಸಕ್ರಿಮಿನಲ್‌ ಕಾನೂನು ಸಂಪೂರ್ಣ ಜಾರಿಯಾಗುತ್ತವೆ. ಅದಾದ ಬಳಿಕ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣವು ಶೇ 80ರಷ್ಟು ಹೆಚ್ಚಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಸೋಮವಾರ ದೆಹಲಿಯಲ್ಲಿ ನಡೆದ 79ನೇ ರೈಸಿಂಗ್ ಡೇ ಪರೇಡ್‌ನಲ್ಲಿ ಭಾಗವಸಿದ್ದ ಅಮಿತ್ ಶಾ, ಪೊಲೀಸರನ್ನು ಉದ್ದೇಶಿಸಿ ಮಾತನಾಡಿದ್ದಾರೆ.ಮೂರು ಹೊಸ ಕ್ರಿಮಿನಲ್ ಕಾನೂನುಗಳು ದೇಶದ ಕಾನೂನು ವ್ಯವಸ್ಥೆಯಲ್ಲಿ ಅತಿ ದೊಡ್ಡ ಸುಧಾರಣೆಯಾಗಿದೆ. ಇದು ವೇಗವಾಗಿ ಪ್ರಕರಣಗಳನ್ನು ಇತ್ಯರ್ಥಗೊಳಿಸುವುದಕ್ಕೆ ಹಾಗೂ ಶಿಕ್ಷೆ ವಿಧಿಸಲು ನೆರವಾಗಲಿದೆ. ಕೆಲವೇ ವರ್ಷಗಳಲ್ಲಿ ಇದು ಸಂಪೂರ್ಣ ಜಾರಿಯಾಗಲಿದೆ ಎಂದು ಹೇಳಿದ್ದಾರೆ.ಭಾರತೀಯ ದಂಡ ಸಂಹಿತೆ(ಐಪಿಸಿ), ಅಪರಾಧ ದಂಡಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಮತ್ತು ಭಾರತೀಯ ಸಾಕ್ಷ್ಯಕಾಯ್ದೆಯ ಬದಲಿಗೆ ಭಾರತೀಯ ನ್ಯಾಯ ಸಂಹಿತೆ(ಬಿಎನ್ಎಸ್), ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ (ಬಿಎಸ್‌ಎ)ವನ್ನು 2024ರ ಜುಲೈ 1ರಂದು ಜಾರಿಗೊಳಿಸಲಾಗಿತ್ತು.

ದೇಶದಲ್ಲಿ ನಕ್ಸಲರ ವಿರುದ್ಧದ ಹೋರಾಟವು ಅಂತಿಮ ಹಂತಕ್ಕೆ ಬಂದಿದೆ. ಮಾರ್ಚ್ ವೇಳೆಗೆ ಅದು ಸಂಪೂರ್ಣ ಕೊನೆಗೊಳ್ಳಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರು ಪೊಲೀಸ್ ವಿಭಾಗಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಸೇಫ್ ಸಿಟಿ ಯೋಜನೆ ಅಡಿಯಲ್ಲಿ ದೆಹಲಿಯಲ್ಲಿ 10 ಸಾವಿರ ಎಐ ಆಧಾರಿತ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುತ್ತಿದ್ದು, ಮೊದಲ ಹಂತದಲ್ಲಿ 2,100 ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಚಾಲನೆ ನೀಡಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!