ಶಬರಿಮಲೆಗೆ ಮಹಿಳೆಯರ ಪ್ರವೇಶ: 9 ಮಂದಿ ನ್ಯಾಯಮೂರ್ತಿಗಳ ಪೀಠದಿಂದ ಅಂತಿಮ ವಿಚಾರಣೆ

Picture of Savistara

Savistara

Bureau Report

ನವದೆಹಲಿ: ಕೇರಳದ ಶಬರಿಮಲೆ ಸೇರಿ ಧಾರ್ಮಿಕ ಸ್ಥಳಗಳಲ್ಲಿಹಾಗೂ ಧರ್ಮಗಳಲ್ಲಿ ಮಹಿಳಾ ತಾರತಮ್ಯದ ಕುರಿತು ಸಲ್ಲಿಕೆಯಾಗಿರುವ ಅರ್ಜಿಯ ಅಂತಿಮ ವಿಚಾರಣೆಯನ್ನು 9 ನ್ಯಾಯಮೂರ್ತಿಗಳ ಪೀಠ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

9 ನ್ಯಾಯಮೂರ್ತಿಗಳನ್ನೊಳಗೊಂಡ ಪೀಠವನ್ನು ಮುಖ್ಯನ್ಯಾಯಮೂರ್ತಿ ರಚಿಸಲಿದ್ದಾರೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯ್ಯಲ್ಯ ಬಾಗ್ನಿ ಹಾಗೂ ವಿಪುಲ್ ಎಂ. ಪಾಂಚೋಲಿ ಅವರಿದ್ದ ಪೀಠ ಹೇಳಿತು. ಏಪ್ರಿಲ್ 9 ರಿಂದ ವಿಚಾರಣೆ ಆರಂಭವಾಗಲಿದೆ.ಏಪ್ರಿಲ್ 22ರಂದು ವಿಚಾರಣೆ ಮುಗಿಯುವ ನಿರೀಕ್ಷೆ ಇದೆ.ಮಾರ್ಚ್ 14ರೊಳಗೆ ವಾದವನ್ನು ಬರಹ ರೂಪದಲ್ಲಿ ಸಲ್ಲಿಸಿ ಎಂದು ಪಕ್ಷಗಾರರಿಗೆ ಕೋರ್ಟ್ ಇದೇ ವೇಳೆ ಸೂಚಿಸಿದೆ.

ಎಲ್ಲಾ ವಯೋಮಾನದ ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶಿಸಬಹುದು ಎಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಪುನರ್‌ಪರಿಶೀಲನೆ ನಡೆಸಲು ಸಲ್ಲಿಸಿರುವ ಅರ್ಜಿಗೆ ಬೆಂಬಲ ನೀಡಲಾಗಿದೆ ಎಂದು ಕೇಂದ್ರ ಸರ್ಕಾರದ ಸಾಲಿಸಿಟ‌ರ್ ಜನರಲ್ ತುಷಾರ್ ಮೆಹ್ರಾ ಹೇಳಿದ್ದಾರೆ.

ಶಬರಿಮಲೆ ತೀರ್ಪನ್ನು ಪುನರ್‌ಪರಿಶೀಲನೆ ನಡೆಸಲು ಸಲ್ಲಿಸಲಾದ ಅರ್ಜಿದಾರರ ನೋಡಲ್ ವಕೀಲರನ್ನಾಗಿ ಕೃಷ್ಣ ಕುಮಾರ್ ಸಿಂಗ್ ಅವರನ್ನೂ, ಪುನರ್‌ಪರಿಶೀಲನೆಗೆ ವಿರುದ್ಧ ಇರುವವರಿಗೆ ನೋಡಲ್ ವಕೀಲರಾಗಿ ಶಾಶ್ವತಿ ಪರಿಯವರನ್ನೂ ಇದೇ ವೇಳೆ ಕೋರ್ಟ್ ನೇಮಿಸಿದೆ.ಜೊತೆಗೆ ಹಿರಿಯ ವಕೀಲರಾದ ಕೆ. ಪರಮೇಶ್ವರ ಹಾಗೂ ಶಿವಂ ಸಿಂಗ್‌ ಅವರನ್ನು ಅಮಿಕಸ್ ಕ್ಯೂರಿಗಳನ್ನಾಗಿ ನೇಮಿಸಿದ್ದಾಗಿಯೂ ಕೋರ್ಟ್ ಪ್ರಕಟಿಸಿದೆ.

2026ರ ಏಪ್ರಿಲ್ 7ರಂದು ಬೆಳಿಗ್ಗೆ 10.30ಕ್ಕೆ 9 ಮಂದಿ ನ್ಯಾಯಮೂರ್ತಿಗಳ ಪೀಠ ಶಬರಿಮಲೆ ಪ್ರಕರಣದ ಪುನರ್‌ಪರಿಶೀಲನೆ ಅರ್ಜಿಯ ವಿಚಾರಣೆ ನಡೆಸುವುದಾಗಿಯೂ, ಪುನರ್‌ಪರಿಶೀಲನೆ ಅರ್ಜಿದಾರರು ಹಾಗೂ ಅವರಿಗೆ ಬೆಂಬಲ ನೀಡುವವರನ್ನು ಫೆ. 7 ರಿಂದ 9ರವೆಗೆ, ವಿರೋಧಿಸುವವರನ್ನು ಏ. 14 ರಿಂದ 16ರವರೆಗೆ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ.ಅಲ್ಲದೆ ಕಾಲಮಿತಿಯನ್ನು ಪಾಲಿಸಬೇಕು ಎಂದು ಪ್ರಕರಣದಲ್ಲಿ ಹಾಜರಾಗುವ ವಕೀಲರಿಗೆ ನ್ಯಾಯಾಲಯ ನಿರ್ದೇಶಿಸಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!