ಬೆಂಗಳೂರು: ಪವಿತ್ರಾಗೌಡ ಜಾಮೀನು ಅರ್ಜಿ ವಜಾ

Picture of Savistara

Savistara

Bureau Report

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರುವ ಪವಿತ್ರಾಗೌಡ ಅವರ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.

‘ಪುತ್ರಿಗೆ ಪರೀಕ್ಷೆ ಸಮೀಪಿಸಿದ್ದರಿಂದ ಮಧ್ಯಂತರ ಜಾಮೀನು ನೀಡಬೇಕು’ ಎಂದು ಪವಿತ್ರಾ ಅವರು ವಕೀಲರ ಮೂಲಕ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಇದನ್ನು ತಿರಸ್ಕರಿಸಿದೆ.ಪವಿತ್ರಾ ಅವರ ಜಾಮೀನು ಅರ್ಜಿಗೆ ಆಕ್ಷೇಪಿಸಿದ ಪ್ರಾಸಿಕ್ಯೂಷನ್‌ ಪರ ವಕೀಲರು, ಜಾಮೀನು ಮಂಜೂರು ಮಾಡಬಾರದೆಂದು ಕೋರಿದರು. ಈ ಹಿಂದೆಯೂ ಪವಿತ್ರಾಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿತ್ತು.ಇದೇ ಪ್ರಕರಣದ 11ನೇ ಆರೋಪಿ ನಾಗರಾಜ್ ಅವರೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಆದೇಶ ಕಾಯ್ದಿರಿಸಿದೆ.

‘ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಶಸ್ತ್ರ ಚಿಕಿತ್ಸೆಯ ಸಂದರ್ಭದಲ್ಲಿ ನಾನು ಹಾಜರಿರಬೇಕು’ ಎಂಬುದಾಗಿ ನಾಗರಾಜ್ ಅರ್ಜಿಯಲ್ಲಿ ಕೋರಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!